ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ

Kampli protest formars support
ಕಂಪ್ಲಿ ತಹಸಿಲ್ ಕಚೇರಿ ಮುಂದೆ ಗ್ರಾಮ ಆಡಳಿತ ಅಧಿಕಾರಿಗಳು ಕೈಗೊಂಡಿರುವ ಮುಷ್ಕರದಲ್ಲಿ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ರೈತಸಂಘದ ತಾಲೂಕು ಅಧ್ಯಕ್ಷ ವಿ.ವೀರೇಶ್, ಕಾರ್ಯಾಧ್ಯಕ್ಷ ಕೊಟ್ಟೂರು ರಮೇಶ್, ಪದಾಧಿಕಾರಿಗಳಾದ ಟಿ.ಗಂಗಣ್ಣ, ಡಿ.ಮುರಹರಿ, ಕೆ.ಅಕ್ಬರ್, ಸುದರ್ಶನ ಇದ್ದರು.
Published on

ಕಂಪ್ಲಿ: ತಹಸಿಲ್ ಕಚೇರಿ ಮುಂದೆ ಗ್ರಾಮ ಆಡಳಿತ ಅಧಿಕಾರಿಗಳ ಸಂಘದಿಂದ ನಡೆದಿರುವ ಅನಿರ್ದಿಷ್ಟಾವಧಿ ಮುಷ್ಕರ ಮಂಗಳವಾರ ಎರಡು ದಿನ ಪೂರೈಸಿತು. ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಬೆಂಬಲ ಸೂಚಿಸಿದರು.

ರೈತ ಸಂಘದ ನಗರ ಘಟಕದ ಅಧ್ಯಕ್ಷ ಎನ್.ತಿಮ್ಮಪ್ಪ ಮಾತನಾಡಿ, ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಬೇಕು. ಮುಷ್ಕರದಿಂದಾಗಿ ರೈತರ ಕಚೇರಿ ಕಾರ್ಯಗಳಿಗೆ ತೊಡಕಾಗಿದೆ ಎಂದು ಹೇಳಿದರು.

ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ತಾಲೂಕು ಅಧ್ಯಕ್ಷ ಎಚ್.ವಿ.ಮಂಜುನಾಥ, ಪದಾಧಿಕಾರಿಗಳಾದ ವನಿತಾ ಕುಮಾರಿ, ಕೆ.ರಾಘವೇಂದ್ರ, ನಾರನಗೌಡ್ರು ಕಾಂತರಾಜ, ಲಕ್ಷ್ಮಣನಾಯ್ಕ, ಜಿಲಾನ್, ರೂಪಿಣಿ, ಶಿವರುದ್ರಯ್ಯ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net