ಅಕ್ರಮ ದಾಸ್ತಾನು ಪ್ರಕರಣದಲ್ಲಿ ಸಿಕ್ಕಿಸುವ ಪ್ರಯತ್ನ

26072022 kampli b narayanappa
Published on

ಶಾಸಕ ಜೆ.ಎನ್.ಗಣೇಶ್ ವಿರುದ್ಧ ರಾಮಸಾಗರದ ಬಿ.ನಾರಾಯಣಪ್ಪ ಆರೋಪ

ಕಂಪ್ಲಿ: ಪಡಿತರ ಅಕ್ಕಿ ಅಕ್ರಮ ದಾಸ್ತಾನು ಪ್ರಕರಣದಲ್ಲಿ ಶಾಸಕ ಗಣೇಶ್ ವಿನಾಕಾರಣ ನನ್ನನ್ನು ಸಿಕ್ಕಿಹಾಕಿಸುವ ಪ್ರಯತ್ನ ನಡೆಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ರಾಮಸಾಗರದ ಬಿ.ನಾರಾಯಣಪ್ಪ ಆರೋಪಿಸಿದ್ದಾರೆ.

ನಾನು ಕಾಂಗ್ರೆಸ್ ಟಿಕೆಟ್‌ನ ಪ್ರಬಲ ಆಕಾಂಕ್ಷಿಯಾಗಿದ್ದರಿಂದ ಉದ್ದೇಶಪೂರ್ವಕವಾಗಿ ಗುರಿ ಮಾಡಿ ಪಡಿತರ ಅಕ್ಕಿ ಅಕ್ರಮ ದಾಸ್ತಾನಿನಲ್ಲಿ ಎಳೆಯುತ್ತಿದ್ದಾರೆ ಸೋಮವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು. ಶಾಸಕರು ಅಭಿವೃದ್ಧಿ ಕಾಮಗಾರಿಗಳು, ಶಾಲಾ ಮಕ್ಕಳ ಯೂನಿಫಾರ್ಮ್, ಬೂಟ್‌ಗಳಲ್ಲಿ ಕಮಿಷನ್ ಪಡೆಯುತ್ತಿರುವುದು ಗುಟ್ಟಾಗಿ ಉಳಿದಿಲ್ಲ. ಮಕ್ಕಳ ಅಂಗನವಾಡಿ ಆಹಾರ ವಿತರಣೆಗೆ ತಿಂಗಳಿಗೆ ಹತ್ತು ಲಕ್ಷ ರೂ. ಕಮಿಷನ್ ಪಡೆಯುತ್ತಿದ್ದಾರೆ. ಶಾಸಕರಾದ ನಂತರ ಗಣೇಶ್ ನೂರಾರು ಕೋಟಿ ರೂ. ಆಸ್ತಿ ಮಾಡಿದ್ದಾರೆ. ಇದೆಲ್ಲವನ್ನೂ ಕ್ಷೇತ್ರದ ಜನ ಗಮನಿಸುತ್ತಿದ್ದಾರೆ. ಗಣೇಶ್ ಸಾಚಾ ಆಗಿದ್ದರೆ ಕುರುಗೋಡು ದೊಡ್ಡಬಸಪ್ಪನ ಮುಂದೆ ಆಣೆ ಮಾಡಲಿ. ನಾನು ನನ್ನ ಹೆಂಡತಿ ಮಕ್ಕಳೊಂದಿಗೆ ಆಣೆ ಮಾಡುತ್ತೇನೆ ಎಂದು ಸವಾಲು ಹಾಕಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net