

ಕಂಪ್ಲಿ: ಕಂಪ್ಲಿ ಸೇರಿ ರಾಜ್ಯದ 20 ಹೋಬಳಿಯಲ್ಲಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ಹಸಿರು ನಿಶಾನೆ ತೋರಿದೆ.
2024-25ನೇ ಸಾಲಿನ ಆಯವ್ಯಯ ಕಂಡಿಕೆ-163ರಲ್ಲಿ ವಸತಿ ಶಾಲೆಗಳು ಇಲ್ಲದ ಹೋಬಳಿಯಲ್ಲಿ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆ ಸಂಘದ ಮೂಲಕ ವಸತಿ ಶಾಲೆ ಆರಂಭಿಸಲು ಸರ್ಕಾರ 2024ರ ಸೆ.27ರಂದು ಆದೇಶಿಸಿದೆ. ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಆರ್ಥಿಕ ಇಲಾಖೆಯ ಸಹಮತಿಯು ದೊರೆತಿದೆ. ಇದು ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವರದಾನವಾಗಿದೆ.
ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿಯೇ ವಸತಿ ಶಾಲೆ ಆರಂಭಿಸಲು ಉದ್ದೇಶಿಸಲಾಗಿದೆ. ಶೀಘ್ರದಲ್ಲಿಯೇ 50 ಮಕ್ಕಳ ಪ್ರವೇಶಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ. ವಸತಿ ಕಟ್ಟಡಕ್ಕಾಗಿ ಹಂಪಾದೇವನಹಳ್ಳಿ ಗ್ರಾಮದಲ್ಲಿ ಹತ್ತು ಎಕರೆ ಜಮೀನು ನಿಗದಿಯಾಗಿದೆ. ಸದ್ಯ ಕಂಪ್ಲಿ ಪಟ್ಟಣದ ಬಾಡಿಗೆ ಕಟ್ಟಡದಲ್ಲಿ ವಸತಿ ಶಾಲೆ ಆರಂಭಿಸಲಾಗುವುದು ಎಂದು ಶಾಸಕ ಜೆ.ಎನ್.ಗಣೇಶ್ ತಿಳಿಸಿದರು.