ಕಂಪ್ಲಿಯಲ್ಲಿ ಸರಳವಾಗಿ ನಡೆದ ಲಕ್ಷ್ಮೀ ವೆಂಕಟರಮಣ ಕಲ್ಯಾಣ ಬ್ರಹ್ಮೋತ್ಸವ

191221 Kampli Satyanarayanapete Brahmotsava
ಕಂಪ್ಲಿಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಲಕ್ಷ್ಮೀ ವೆಂಕಟರಮಣ ಕಲ್ಯಾಣ ಬ್ರಹ್ಮೋತ್ಸವದಲ್ಲಿ ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀಗಳು, ಕೂಡಲಿಯ ಜಗದ್ಗುರು ಡಾ.ವಿದ್ಯಾಭಿನವ ವಿದ್ಯಾರಣ್ಯ ಭಾರತೀ ಶ್ರೀಗಳು, ಸಂಕೇಶ್ವರ ಕರವೀರಪುರದ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಮಠದ ಸಚ್ಚಿದಾನಂದ ಅಭಿನವ ನರಸಿಂಹಭಾರತೀ ಶ್ರೀಗಳು ಇದ್ದರು.
Published on

ಕಂಪ್ಲಿ: ಇಲ್ಲಿನ ಸತ್ಯನಾರಾಯಣಪೇಟೆಯ ವೆಂಕಟರಮಣ ದೇವಸ್ಥಾನದಲ್ಲಿ ಭಾನುವಾರ ಶ್ರೀ ಲಕ್ಷ್ಮೀ ವೆಂಕಟರಮಣ ಕಲ್ಯಾಣ ಬ್ರಹ್ಮೋತ್ಸವ ನಡೆಯಿತು.

ಶ್ರೀಮನ್ನಾರಾಯಣಾಶ್ರಮದ ಪರಮಹಂಸ ನಾರಾಯಣ ವಿದ್ಯಾಭಾರತಿ ಶ್ರೀಗಳು ಮಾತನಾಡಿ, ಲಕ್ಷ್ಮೀ ವೆಂಕಟರಮಣನ ಆರಾಧನೆಯಿಂದ ಇಷ್ಟಾರ್ಥಗಳು ನೆರವೇರುತ್ತವೆ. ಆಧ್ಯಾತ್ಮಿಕ ಮತ್ತು ಧಾರ್ಮಿಕ ಮನೋಭಾವನೆಗಳನ್ನು ಬೆಳೆಸಿಕೊಂಡಲ್ಲಿ ಭವಬಂಧನಗಳಿಂದ ಪಾರಾಗಲು ಸಾಧ್ಯವಿದೆ ಎಂದರು. ದೇವಸ್ಥಾನದಲ್ಲಿ ಬೆಳಗ್ಗೆ ಮಹಾಭಿಷೇಕ, ಲಕ್ಷ್ಮೀನಾರಾಯಣ ಹೋಮ, ಅನ್ನಸಂತರ್ಪಣೆ, ರಥೋತ್ಸವ ಶ್ರದ್ಧಾಭಕ್ತಿಗಳಿಂದ ಜರುಗಿದವು.

ಕೂಡಲಿಯ ಜಗದ್ಗುರು ಡಾ.ವಿದ್ಯಾಭಿನವ ವಿದ್ಯಾರಣ್ಯಭಾರತೀ ಶ್ರೀಗಳು, ಸಂಕೇಶ್ವರ ಕರವೀರಪುರದ ಜಗದ್ಗುರು ಶಂಕರಾಚಾರ್ಯ ಸಂಸ್ಥಾನ ಮಠದ ಸಚ್ಚಿದಾನಂದ ಅಭಿನವ ನರಸಿಂಹಭಾರತೀ ಶ್ರೀಗಳು ಸಾನ್ನಿಧ್ಯವಹಿಸಿದ್ದರು. ಸೇವಾ ಧರ್ಮದರ್ಶಿಗಳಾದ ವೈಷ್ಣವಿ ಕೃಷ್ಣಮೂರ್ತಿ, ಲಲಿತಾರಾಣಿ ಗಿರೀಶ್, ರೂಪಾ ಗುರುಪ್ರಸಾದ್, ಸವಿತಾ ಶಶಿಧರ್, ಭಗವತಿ, ಸುಧಾ ನಾಗರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net