ಕಾಲುವೆಗಳಿಗೆ ಕೂಡಲೇ ನೀರು ಹರಿಸಿ: ಬಿಜೆಪಿ ರೈತ ಮೋರ್ಚಾ ಮುಖಂಡರ ಆಗ್ರಹ

19072021 Kampli BJP Manavi
Published on

ಕಂಪ್ಲಿ: ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ನಿರ್ಧರಿಸಿದಂತೆ ಎಲ್‌ಎಲ್‌ಸಿ, ಎಚ್‌ಎಲ್‌ಸಿಗಳಿಗೆ ಕೂಡಲೇ ನೀರು ಹರಿಸಬೇಕೆಂದು ಬಿಜೆಪಿ ರೈತ ಮೋರ್ಚಾ ಮುಖಂಡರು ಸೋಮವಾರ ತಹಸೀಲ್ದಾರ್ ಗೌಸಿಯಾಬೇಗಂಗೆ ಮನವಿ ಸಲ್ಲಿಸಿದರು.

ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಎನ್.ಚಂದ್ರಕಾಂತರೆಡ್ಡಿ ಮಾತನಾಡಿ, ಜು.18ರಿಂದ ಕಾಲುವೆಗಳಿಗೆ ನೀರು ಹರಿಸಲು ತೀರ್ಮಾನಿಸಲಾಗಿತ್ತು. ಆದರೆ, ಕಾಲುವೆಗಳ ದುರಸ್ತಿ ಕಾಮಗಾರಿ ನೆಪದಲ್ಲಿ, ಆಂಧ್ರದ ಗುತ್ತಿಗೆದಾರರ ಒತ್ತಡಕ್ಕೆ ಮಣಿದ ಟಿಬಿ ಡ್ಯಾಂ ಅಧಿಕಾರಿಗಳು ಕಾಲುವೆಗಳಿಗೆ ನೀರು ಹರಿಸಿಲ್ಲ. ಜಲಾಶಯ ವ್ಯಾಪ್ತಿಯಲ್ಲಿ ಸದ್ಯ ಮಳೆಯಾಗುತ್ತಿದ್ದು, ಒಳಹರಿವು ಇರುವುದರಿಂದ ಕಾಲುವೆಗಳಿಗೆ ನೀರು ಹರಿಸಿದರೆ ನೀರಿನ ಸಂಗ್ರಹಕ್ಕೆ ಧಕ್ಕೆಯಾಗದು. ಜಲಾಶಯದ ಅಧಿಕಾರಿಗಳ ನೀರಿನ ಅಸಮರ್ಪಕ ನಿರ್ವಹಣೆಯಿಂದಾಗಿ 2014 ರಿಂದ 2019ರತನಕ 2ನೇ ಬೆಳೆಗೆ ನೀರು ದೊರಕದೆ ರೈತರು ಸಂಕಷ್ಟಕ್ಕೀಡಾಗಿದ್ದರು. ಅದು ಮರುಕಳಿಸದಂತೆ ಎಚ್ಚರಿಕೆವಹಿಸಬೇಕು ಎಂದು ಆಗ್ರಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net