ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆ ಭೀತಿ: ವಾಹನ, ಪಾದಚಾರಿಗಳ ಸಂಚಾರ ನಿಷೇಧ, 52 ಕುಟುಂಬಗಳ ಸ್ಥಳಾಂತರಕ್ಕೆ ಕ್ರಮ

26072021 Kampli bridge
Published on

ಕಂಪ್ಲಿ : ತುಂಗಭದ್ರಾ ಜಲಾಶಯದಿಂದ ನದಿಗೆ ಸೋಮವಾರ ಒಂದು ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಬಿಟ್ಟಿದ್ದರಿಂದ ಕಂಪ್ಲಿ-ಗಂಗಾವತಿ ಸೇತುವೆ ಮುಳುಗಡೆ ಭೀತಿ ಎದುರಾಗಿದೆ.

ಬೆಳಗ್ಗೆ 11 ಗಂಟೆ ವೇಳೆಗೆ ಸೇತುವೆ ತಳಭಾಗಕ್ಕೆ ಸಮವಾಗಿ ನೀರು ಹರಿಯುತ್ತಿದ್ದರಿಂದ ಸರ್ಕಾರಿ ಬಸ್, ಭಾರಿ ವಾಹನಗಳ ಸಂಚಾರ ನಿಷೇಧಿಸಲಾಯಿತು. ದ್ವಿಚಕ್ರವಾಹನ, ಆಟೋದಂತಹ ಲಘು ವಾಹನಗಳು, ಪಾದಚಾರಿಗಳಿಗೆ ಅವಕಾಶ ನೀಡಲಾಗಿತ್ತು. ಮಧ್ಯಾಹ್ನ ಪಾದಚಾರಿಗಳ ಸಂಚಾರವನ್ನೂ ಬಂದ್ ಮಾಡಲಾಯಿತು.

ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ತಹಸೀಲ್ದಾರ್ ಗೌಸಿಯಾಬೇಗಂ ಮಾತನಾಡಿ, 1.30 ಲಕ್ಷ ಕ್ಯೂಸೆಕ್ ನೀರು ಹರಿದು ಬರುತ್ತಿದ್ದು ಸೇತುವೆ ಮುಳುಗುವ ಸಾಧ್ಯತೆಯಿದೆ. ಸೇತುವೆ ಹಳೆಯದಾಗಿದ್ದರಿಂದ ಸೂಕ್ತ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ. ನದಿ ಪಾತ್ರದ ಜನತೆಗೆ ಎಚ್ಚರಿಕೆ ನೀಡಲಾಗಿದೆ. ಸೇತುವೆ ಮೇಲೆ ವಾಹನ ಮತ್ತು ಜನರ ಸಂಚಾರ ನಿಷೇಧಿಸಲಾಗಿದೆ. ಕಂದಾಯ, ಪುರಸಭೆ, ಆರೋಗ್ಯ, ಜೆಸ್ಕಾಂ ಇಲಾಖೆ ಅಧಿಕಾರಿಗಳು ನಿಗಾವಹಿಸಿದ್ದಾರೆ. ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಸಿದಲ್ಲಿ ನದಿ ಪಾತ್ರದ 52 ಕುಟುಂಬಗಳ 250 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net