

ಕಾನಹೊಸಹಳ್ಳಿ: ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯಕರ್ತರ ಸಭೆ ಆಯೋಜಿಸುವ ಮೂಲಕ ಗ್ರಾಮೀಣ ಭಾಗದಲ್ಲಿ ಪಕ್ಷದ ಬಲವರ್ಧನೆಗೆ ಆದ್ಯತೆ ನೀಡಲಾಗುವುದು ಬಿಜೆಪಿ ಮಂಡಲ ಅಧ್ಯಕ್ಷ ಬಣವಿಕಲ್ಲು ನಾಗರಾಜ ತಿಳಿಸಿದರು.
ಕಾನಹೊಸಹಳ್ಳಿ ಸಮೀಪದ ಪೂಜಾರಹಳ್ಳಿಯಲ್ಲಿ ಭಾನುವಾರ ಬಿಜೆಪಿ ಮಹಾಶಕ್ತಿ ಕೇಂದ್ರದಿಂದ ಅಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು. ಪಕ್ಷಕ್ಕಾಗಿ ದುಡಿದ ಪ್ರತಿಯೊಬ್ಬ ಕಾರ್ಯಕರ್ತರನ್ನೂ ಗೌರವಿಸಲಾಗುತ್ತಿದೆ. ಹೀಗಾಗಿ, ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಂತೆ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಲು ಹೆಚ್ಚಿನ ಆಸಕ್ತಿ ವಹಿಸಬೇಕು. ಮುಂಬರುವ ದಿನಗಳಲ್ಲೂ ಬಿಜೆಪಿಯ ಸಂಘಟನಾ ಶಕ್ತಿಯನ್ನು ವೃದ್ಧಿಸಲು ಶ್ರಮಿಸಬೇಕು ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷ ಸಂಜೀವರೆಡ್ಡಿ ಮಾತನಾಡಿ, ಕಳೆದ ಬಾರಿ ತಾಪಂ, ಜಿಪಂ ಚುನಾವಣೆಯಲ್ಲಿ ನಮ್ಮ ಪಕ್ಷವು ಹೆಚ್ಚು ಸ್ಥಾನ ಗೆಲ್ಲುವ ಮೂಲಕ ಉತ್ತಮ ಹಿಡಿತ ಸಾಧಿಸಿತ್ತು. ಹೀಗಾಗಿ ಮತ್ತೆ ಗ್ರಾಮೀಣ ಭಾಗದಲ್ಲಿ ಕಾರ್ಯಕರ್ತರನ್ನು ಒಗ್ಗೂಡಿಸಿ, ಪಕ್ಷ ಬಲಪಡಿಸುವ ಕೆಲಸ ಎಲ್ಲರೂ ಮಾಡಬೇಕೆಂದರು.
ಬಿಜೆಪಿ ಜಿಲ್ಲಾ ಮಹಿಳಾ ಘಟಕದ ಕಾರ್ಯದರ್ಶಿ ಹುಲಿಕೆರೆ ಗೀತಾ, ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬೋಜಣ್ಣ, ಮುಖಂಡ ಜುಮ್ಮೋಬನಹಳ್ಳಿ ಶರಣಪ್ಪ, ಪೂಜಾರಹಳ್ಳಿ ಆರ್‌ಎಸ್‌ಎಸ್‌ಎನ್ ಅಧ್ಯಕ್ಷ ಕುರಿಬೋರಣ್ಣ, ಉಪಾಧ್ಯಕ್ಷ ನುಂಕಪ್ಪ, ಎಸ್ಸಿ ಮೋರ್ಚಾ ಮಂಡಲ ಅಧ್ಯಕ್ಷ ರಾಮಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷರಾದ ಶಿಲ್ಪಾ ಬಸವರಾಜ್, ಮಲ್ಲಮ್ಮ, ಸದಸ್ಯರಾದ ಕೋರಿ ಈರಣ್ಣ, ವೆಂಕಟೇಶ, ಸಿದ್ದನಗೌಡ, ರಾಜಣ್ಣ, ಗೋಕರ್ಣಪ್ಪ, ಮೋತಿನಾಯ್ಕ, ಮುನಿಯಪ್ಪ, ಪರುಶುರಾಮ ಇದ್ದರು.