ಕಿವುಡ ಮತ್ತು ಮೂಗ ಮಕ್ಕಳ ವಿಶೇಷ ಶಾಲೆಯಲ್ಲಿ ಕನಕದಾಸರ ಜಯಂತಿ

spananda kanaka jayanti
Published on

ಗದಗ : ಸ್ಪಂದನಾ ಕಿವುಡ ಮತ್ತು ಮೂಗ ಮಕ್ಕಳ ಶಾಲೆಯಲ್ಲಿ ನವಂಬರ ೧೮ ಸೋಮವಾರ ದಂದು ಕನಕದಾಸರ ೫೩೭ನೇ ಜಯಂತಿಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಕಾರ್ಯದರ್ಶಿಯವರಾದ ಡಾ.ಎಸ್.ಎಫ್. ದ್ಯಾವನಗೌಡರ ವಹಿಸಿಕೊಂಡಿದ್ದರು. ಕನಕದಾಸರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಲಾಯಿತು. ಕನಕದಾಸರ ಬಗ್ಗೆ ಮಾತನಾಡಿದರು. ಮತ್ತು ಅವರ ಭಕ್ತಿಗೀತೆಗಳನ್ನು ಹಾಡಿದರು. ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಶಾಲೆಯ ಎಲ್ಲ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.ಮಕ್ಕಳಿಗೆ ಸಿಹಿಯನ್ನು ಹಂಚುವುದರ ಮೂಲಕ ಕಾರ್ಯಕ್ರಮ ಮುಕ್ತಾಯ ಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net