ಕನಕ ಭವನ, ಹಾಸ್ಟೆಲ್ ಉದ್ಘಾಟನೆ 29ಕ್ಕೆ

23 Dwd 1 (Shree Basavaraj Devaru)
Published on

ಧಾರವಾಡ: ತಾಲೂಕಿನ ಮನಸೂರು ಶ್ರೀ ರೇವಣಸಿದ್ಧೇಶ್ವರ ಮಹಾಮಠ ವಿದ್ಯಾಪೀಠದಲ್ಲಿ ನೂತನವಾಗಿ ನಿರ್ಮಿಸಿದ ಕನಕ ಭವನ, ವಿದ್ಯಾರ್ಥಿ ನಿಲಯ ಹಾಗೂ 2 ಮಹಾದ್ವಾರಗಳ ಲೋಕಾರ್ಪಣೆ ಸಮಾರಂಭವನ್ನು ಆ. 29ರಂದು ಬೆಳಗ್ಗೆ 10 ಗಂಟೆಗೆ ಆಯೋಜಿಸಲಾಗಿದೆ ಎಂದು ಮಠದ ಪೀಠಾಧ್ಯಕ್ಷ ಡಾ. ಬಸವರಾಜ ದೇವರು ಹೇಳಿದರು.
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಅತಿಥಿಗಳಾಗಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ವಿಧಾನ ಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಬೈರತಿ ಸುರೇಶ ಪಾಲ್ಗೊಳ್ಳುವರು. ಉಸ್ತುವಾರಿ ಸಚಿವ ಸಂತೋಷ ಲಾಡ್ ಅಧ್ಯಕ್ಷತೆ ವಹಿಸುವರು. ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಽಗಳು, ಸುತ್ತಲಿನ ಗ್ರಾಮಗಳ ಭಕ್ತರು ಭಾಗವಹಿಸುವರು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net