8ರಂದು ಕನಕದಾಸರ ಜಯಂತಿ

Thippeswamy
Published on

ತುಮಕೂರು: ಜಿಲ್ಲಾಡಳಿತ ವತಿಯಿಂದ ನ.8ರಂದು ನಗರದ ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ಸಂತ ಶ್ರೇಷ್ಠ ಕನಕದಾಸರ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಎನ್​.ತಿಪ್ಪೇಸ್ವಾಮಿ ತಿಳಿಸಿದರು.

ನಗರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜರುಗಿದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಕನಕದಾಸರ ವಿಚಾರಧಾರೆ ಮತ್ತು ಅವರ ಜೀವನ ಕುರಿತು ತಿಳಿಸುವಂತೆ ಜಯಂತಿ ಅರ್ಥಪೂರ್ಣವಾಗಿ ಆಯೋಜನೆ ಮಾಡಬೇಕು. ಸಮುದಾಯದ 10 ಮಂದಿ ಸಾಧಕರನ್ನು ಗುರುತಿಸಿ ಸನ್ಮಾನಿಸಲು ಮತ್ತು ಕಾರ್ಯಕ್ರಮಕ್ಕೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಸಮಿತಿ ರಚಿಸುವಂತೆ ಸೂಚಿಸಿದರು.

ನಗರದ ಶಿರಾಗೇಟ್​ ಬಳಿಯಲ್ಲಿರುವ ಕನಕ ಪುತ್ಥಳಿಯನ್ನು ಜಯಂತಿ ದಿನದಂದು ಶೃಂಗಾರಗೊಳಿಸುವಂತೆ ಮಹಾನಗರ ಪಾಲಿಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ನಗರದ ಶಿರಾ ಗೇಟ್​, ದಿಬ್ಬೂರು ಸೇರಿದಂತೆ ವಿವಿಧ ಭಾಗಗಳಿಂದ ಮೆರವಣಿಗೆ ಆಗಮಿಸುವುದರಿಂದ ಮೆರವಣಿಗೆಗೆ ವಿವಿಧ ಕಲಾ ತಂಡಗಳನ್ನು ಕರೆತರುವಂತೆ ಕನ್ನಡ ಮತ್ತು ಸಂಸತಿ ಇಲಾಖೆ ಸಹಾಯಕ ನಿರ್ದೇಶಕ ಈಶ್ವರ್​ ಕು.ಮಿರ್ಜಿ ಅವರಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net