ಕನಕ ಅಭಿವೃದ್ಧಿ ಸಂಘಕ್ಕೆ 1.12 ಲಕ್ಷ ರೂ. ನಿವ್ವಳ ಲಾಭ

26.Pyp.. 01
Published on

 ಪಿರಿಯಾಪಟ್ಟಣ: ತಾಲೂಕಿನ ಶ್ರೀ ಕನಕ ಅಭಿವೃದ್ಧಿ ಸಹಕಾರ ಸಂಘ 2024-25 ನೇ ಸಾಲಿನಲ್ಲಿ 1.12 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ಸಂಘದ ಅಧ್ಯಕ್ಷ ಡಿ.ಎ.ನಾಗೇಂದ್ರ ತಿಳಿಸಿದರು.

ಪಟ್ಟಣದ ಕನಕ ಸಮುದಾಯ ಭವನದಲ್ಲಿ ಗುರುವಾರ ಆಯೋಜಿಸಿದ್ದ ಕನಕ ಅಭಿವೃದ್ಧಿ ಸಹಕಾರ ಸಂಘದ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯಲ್ಲಿ ಮಾತನಾಡಿ, ಕಳೆದ ಸಾಲಿನಲ್ಲಿ ಸಂಘದ 102 ಷೇರುದಾರರಿಗೆ ಸಾಲ ಮಂಜೂರು ಮಾಡಲಾಗಿತ್ತು. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಷೇರುದಾರರಿಗೆ ಆರ್ಥಿಕ ನೆರವು ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಸಂಘದ ವ್ಯಾಪ್ತಿಯನ್ನು ಹಂತ ಹಂತವಾಗಿ ವಿಸ್ತರಿಸಲಾಗುತ್ತಿದ್ದು ತಾಲೂಕಿನ ಪ್ರತಿ ಗ್ರಾಮದಲ್ಲೂ ಷೇರುದಾರರನ್ನು ಹೊಂದುವುದು ನಮ್ಮ ಗುರಿಯಾಗಿದೆ. ಸಂಘದ ವತಿಯಿಂದ ಮುಂದಿನ ದಿನಗಳಲ್ಲಿ ಆರೋಗ್ಯ ತಪಾಸಣಾ ಶಿಬಿರಗಳನ್ನು ಏರ್ಪಡಿಸಿ ಸಂಘದ ಸದಸ್ಯರಿಗೆ ಉಚಿತ ತಪಾಸಣೆ ನಡೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.

ಸಂಘದ ಸಿಇಒ ನಂಜುಂಡೇಗೌಡ ಮಾತನಾಡಿದರು. ತಾಲೂಕು ಕುರುಬ ಸಮಾಜದ ಅಧ್ಯಕ್ಷ ಎಚ್.ಡಿ.ಗಣೇಶ್, ಸಹಕಾರ ಸಂಘದ ಉಪಾಧ್ಯಕ್ಷ ಗಣೇಶ್, ನಿರ್ದೇಶಕರಾದ ಆರ್.ಎಸ್.ಮಹದೇವ, ಚಿಕ್ಕೇಗೌಡ, ಎಚ್.ಎನ್.ಲೋಹಿತ್, ಎನ್.ಎಸ್.ಮಹದೇವ, ಕೆ.ಟಿ.ಮಹದೇವ, ಕೆ.ಎಂ.ಲಕ್ಷ್ಮಣ, ಶಿವಣ್ಣ, ಶೀಲಾ, ಮಂಜುಳಾ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net