ಕನಕ ಗುರುಪೀಠದಲ್ಲಿ ಹಾಲುಮತ ಸಂಸ್ಕೃತಿ ವೈಭವ

TINTINI SWAMIJIM PRESS MEET (1)
Published on

ರಾಯಚೂರು: ದೇವದುರ್ಗ ತಾಲೂಕಿನ ತಿಂಥಿಣಿ ಬ್ರಿಡ್ಜ್ ಹತ್ತಿರವಿರುವ ಕಾಗಿನೆಲೆ ಕನಕ ಗುರುಪೀಠದಲ್ಲಿ ಜ.12 ರಿಂದ 14ರವರೆಗೆ ಹಾಲುಮತ ಸಂಸ್ಕೃತಿ ವೈಭವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಗುರುಪೀಠದ ಪೀಠಾಪತಿ ಸಿದ್ಧರಾಮಾನಂದ ಸ್ವಾಮೀಜಿ ತಿಳಿಸಿದರು.
ಸ್ಥಳೀಯ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಸೋಮವಾರ ಮಾತನಾಡಿ, ಕಳೆದ 2007ರಿಂದ ಪ್ರತಿವರ್ಷ ಒಂದೊಂದು ವಿಷಯವನ್ನು ಪ್ರಮುಖವಾಗಿಸಿಕೊಂಡು ಕಾರ್ಯಕ್ರಮ ನಡೆಸಲಾಗುತ್ತಿದ್ದು, ಈ ಬಾರಿ ಹಾಲುಮತ ಸಾಹಿತ್ಯವನ್ನು ಮುಖ್ಯವಾಗಿಟ್ಟುಕೊಂಡು ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.
ಜ.12ರಂದು ಬೆಳಗ್ಗೆ 10.30ಕ್ಕೆ ಮೊದಲ ಕಾರ್ಯಾಗಾರವನ್ನು ಹಿರಿಯ ಸಾಹಿತಿ ಎಸ್.ಜಿ.ಸಿದ್ದರಾಮಯ್ಯ ಉದ್ಘಾಟಿಲಿಸದುದ, ರೇವಣಸಿದ್ಧೇಶ್ವರ ಮಠದ ರೇವಣಸಿದ್ಧೇಶ್ವರ ಶಾಂತಮಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಹಂಪಿ ಕನ್ನಡ ವಿವಿ ಪ್ರಾಧ್ಯಾಪಕ ಡಾ.ಕೆ.ಎಂ.ಮೈತ್ರಿ ಅಧ್ಯಕ್ಷತೆ ವಹಿಸಲಿದ್ದಾರೆ. ಪಂ.ಚಂದ್ರಕಾಂತ ಬಿಜ್ಜರಗಿ ಉಪನ್ಯಾಸ ನೀಡಲಿದ್ದಾರೆ.
ಮಧ್ಯಾಹ್ನ 12ಕ್ಕೆ ಯುವಜನ ಸಮಾವೇಶ ನಡೆಯಲಿದ್ದು, ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹಾಗೂ ಇಲಕಲ್‌ನ ಗುರುಮಹಾಂತ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವರಾದ ಪ್ರಹ್ಲಾದ ಜೋಷಿ, ಭಗವಂತ ಖುಬಾ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಂಜೆ 4ಕ್ಕೆ ಹಾಲುಮತ ಸಾಹಿತ್ಯ ಕುರಿತು ಕಾರ್ಯಾಗಾರ ನಡೆಯಲಿದೆ.
ಜ.13ರಂದು ಹಾಲುಮತ ಭಾಸ್ಕರ, ಕನಕರತ್ನ, ಸಿದ್ದಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಸಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದಾರೆ. ಕನಕ ಗುರುಪೀಠದ ಶಿವಾನಂದ ಸ್ವಾಮೀಜಿ, ಸಿಂಧಗಿಯ ಅಭಿನವ ಪುಂಡಲಿಂಗ ಮಹಾರಾಜ ಸಾನ್ನಿಧ್ಯ ವಹಿಸಲಿದ್ದಾರೆ. ಮಾಜಿ ಸಚಿವ ಎಚ್.ವಿಶ್ವನಾಥ ಅಧ್ಯಕ್ಷತೆ ವಹಿಸಲಿದ್ದು, ವಿವಿಧ ಜನಪ್ರತಿನಿಗಳು ಪಾಲ್ಗೊಳ್ಳಲಿದ್ದಾರೆ.
ಜ.14ರಂದು ಹಾಲುಮತ ಮಾತೃ ಶಕ್ತಿ ಸಮಾವೇಸ ನಡೆಯಲಿದ್ದು, ಹೊಸದುರ್ಗದ ಈಶ್ವರಾನಂದಪುರಿ ಸ್ವಾಮೀಜಿ, ಮಲ್ಲಾರಲಿಂಗ ಮಹಾರಾಜ, ಅಡವಿಲಿಂಗ ಮಹಾರಾಜ, ವರದಾನೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಶಾಸಕ ಕರೆಮ್ಮ ನಾಯಕ ಉದ್ಘಾಟಿಸಲಿದ್ದಾರೆ. ಹಂಪಿ ಕನ್ನಡ ವಿವಿ ವಿಶ್ರಾಂತ ಕುಲಪತಿ ಡಾ.ಮಲ್ಲಿಕಾ ಘಂಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಸಿದ್ದರಾಮಾನಂದ ಸ್ವಾಮೀಜಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕುರುಬ ಸಂಘದ ಅಧ್ಯಕ್ಷ ಕೆ.ಬಸವಂತಪ್ಪ, ಪದಾಕಾರಿಗಳಾದ ಎಂ.ಈರಣ್ಣ, ಕೆ.ನಾಗರಾಜ, ಲಕ್ಷ್ಮಣ ತಾತ, ಹನುಮಂತಪ್ಪ, ಮಹಾದೇವಪ್ಪ, ನಾಗೇಂದ್ರಪ್ಪ ಮಟಮಾರಿ, ನೀಲಕಂಠ ಬೇವಿನ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net