ಅವ್ಯವಸ್ಥೆಯ ವಿರುದ್ಧ ಸಮರ ಕನಕದಾಸರು

19
Published on

ಮೈಸೂರು: ನಗರದ ಸಮಾನ ಮನಸ್ಕ ಬಳಗದ ವತಿಯಿಂದ ಗುರುವಾರ ಶ್ರೀ ಮಹರ್ಷಿ ವಾಲ್ಮೀಕಿ ಪಥದಲ್ಲಿ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.


ಕನಕದಾಸರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದ ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕ್ ಅಧ್ಯಕ್ಷೆ ಪಿ.ರಾಜೇಶ್ವರಿ ಮಾತನಾಡಿ, ಕನಕದಾಸರು ಜನರಿಗೆ ಅರ್ಥವಾಗುವ ಭಾಷೆಯಲ್ಲಿ ಕೀರ್ತನೆಗಳನ್ನು ರಚಿಸಿದರು. ತಮ್ಮ ಕೀರ್ತನೆಗಳಲ್ಲಿ ಭಕ್ತಿ, ವೈರಾಗ್ಯ, ಭಜನೆಗಳಷ್ಟೇ ಅಲ್ಲದೆ, 16ನೇ ಶತಮಾನದ ಸಾಮಾಜಿಕ ಅವ್ಯವಸ್ಥೆಯ ವಿರುದ್ಧ ಸಮರ ಸಾರಿದ್ದರು.

ಇವರ ಕೀರ್ತನೆಗಳು ಎಂದೆಂದಿಗೂ ಪ್ರಸ್ತುತವಾಗಿರುತ್ತವೆ. ಜತೆಗೆ ಮೋಹನ ತರಂಗಿಣಿ, ರಾಮಧಾನ್ಯ ಚರಿತೆಯಂತಹ ಮಹಾನ್ ಕಾವ್ಯ ಕೃತಿಗಳನ್ನು ರಚಿಸಿ ಕನ್ನಡ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿರುತ್ತಾರೆ. ದಾಸ ಸಾಹಿತ್ಯದ ಮೂಲಕ ಜಾತಿ, ಮತ, ಕುಲಗಳ ಭೇದ ಭಾವವನ್ನು ಮೀರಿಸುವಂತೆ ಸಮಾಜದ ಪಿಡುಗುಗಳ ಬಗ್ಗೆ ಸಾಮಾನ್ಯರಿಗೆ ಅರ್ಥವಾಗುವ ಭಾಷೆಯಲ್ಲಿ ತಿಳಿಸಿ ಸಾಮಾಜಿಕ ಕ್ರಾಂತಿಯನ್ನೇ ಮಾಡಿದ ಸಂತ ಎಂದರು.

ವಕೀಲ ಪಡುವಾರಹಳ್ಳಿ ಎಂ.ರಾಮಕೃಷ್ಣ, ಚಾಮರಾಜ ಬಿಜೆಪಿ ಅಧ್ಯಕ್ಷ ಸೋಮಶೇಖರ ರಾಜು, ಮುಖಂಡರಾದ ಸಚಿನ್ ಆರ್.ಗೌಡ, ಸಿ.ಡಿ.ಕುಮಾರ್, ಬಿ.ಕುಮಾರ್, ಲೋಹಿತ್, ಒಂಟಿಕೊಪ್ಪಲು ರಾಜು, ಸುರೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net