

ವಿಜಯವಾಣಿ ಸುದ್ದಿಜಾಲ ಧಾರವಾಡ
ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ನ. 18ರಂದು ಬೆಳಗ್ಗೆ 11 ಗಂಟೆಗೆ ಇಲ್ಲಿನ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಶ್ರೀ ಕನಕದಾಸ ಜಯಂತಿ ಆಯೋಜಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಯಂತಿ ಕಾರ್ಯಕ್ರಮವನ್ನು ನಾವೆಲ್ಲರೂ ವಿಜೃಂಭಣೆಯಿಂದ ಪ್ರತಿ ವರ್ಷದಂತೆ ಆಚರಿಸೋಣ ಎಂದರು.
ಸಮಾಜದ ಮುಖಂಡರಾದ ಬಸಪ್ಪ ಗುಡೆಣ್ಣವರ, ದೇವರಾಜ ಕಂಬಳಿ, ಎನ್.ಎನ್.ಸವಣೂರ, ವಸಂತ, ಸಾರ್ವಜನಿಕರು, ಇತರರು ಇದ್ದರು. ಕುಮಾರ ಬೆಕ್ಕೇರಿ ಸ್ವಾಗತಿಸಿದರು.