ವಿಶ್ವಮಾನವ ಸಂದೇಶ ಸಾರಿದ ಕನಕದಾಸರು

h8-nwksrtc
Published on

ಹುಬ್ಬಳ್ಳಿ: ಇಲ್ಲಿಯ ಗೋಕುಲ ರಸ್ತೆಯ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೇಂದ್ರ ಕಚೇರಿಯಲ್ಲಿ ಶನಿವಾರ ದಾಸಶ್ರೇಷ್ಠ ಭಕ್ತ ಕನಕದಾಸರ ಜಯಂತಿಯನ್ನು ಆಚರಿಸಲಾಯಿತು.

ವಾಕರಸಾ ಸಂಸ್ಥೆ ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪಿ.ಆರ್. ಕಿರಣಗಿ ಮಾತನಾಡಿ, ಕರ್ನಾಟಕ ಹರಿದಾಸ ಸಾಹಿತ್ಯದ ಅಶ್ವಿನಿ ದೇವತೆಗಳಲ್ಲೊಬ್ಬರಾದ ಕನಕದಾಸರು, ಯಾವುದೇ ಜಾತಿ, ಮತ, ಪಂಥ, ಪ್ರದೇಶ ಹಾಗೂ ಭಾಷೆಗೆ ಸೀಮಿತವಾಗಿಲ್ಲ. ವಿಶ್ವಮಾನವ ಸಂದೇಶಗಳನ್ನು ಅವರು ನೀಡಿದ್ದಾರೆ. ಅವರ ಮೋಹನ ತರಂಗಿಣಿ, ನಳ ಚರಿತ್ರೆ, ಹರಿಭಕ್ತಿಸಾರ, ರಾಮಧಾನ್ಯ ಚರಿತ್ರೆ ಎಂಬ ಕಾವ್ಯಗಳು ಹಾಗೂ ಕೀರ್ತನೆಗಳ ಮೂಲಕ ಸಮಾಜದಲ್ಲಿ ಸಮಾನತೆ ಮೂಡಿಸುವ, ಸಮಾಜದ ಅಂಕು-ಡೊಂಕು ತಿದ್ದುವ ಕೆಲಸ ಮಾಡಿದ್ದಾರೆ ಎಂದರು.

ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಶ್ರೀನಿವಾಸಮೂರ್ತಿ ಮಾತನಾಡಿದರು.

ನವೀನಕುಮಾರ ತಿಪ್ಪಾ, ಜಗದೀಶ ಕೋಳಿ, ದಯಾನಂದ ಪಾಟೀಲ, ವಿರೂಪಾಕ್ಷ ಕಟ್ಟಿಮನಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net