

ರಾಮದುರ್ಗ: ಪ್ರತಿಯೊಬ್ಬರು ಕನಕದಾಸರ ತತ್ತ್ವ, ಸಿದ್ಧಾಂತಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಜತೆಗೆ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಬೇಕು ಎಂದು ವಿಧಾನಸಭೆ ಮುಖ್ಯ ಸಚೇತಕ ಅಶೋಕ ಪಟ್ಟಣ ಹೇಳಿದರು.
ಪಟ್ಟಣದ ಪುರಸಭೆ ಸಾಂಸ್ಕೃತಿಕ ಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಕನಕದಾಸರ 537ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು. ಕನಕದಾಸರ ಜಯಂತ್ಯುತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ಕನಕದಾಸರ ಭಾವಚಿತ್ರ ಮೆರವಣಿಗೆ ಸುಮಂಗಲೆಯರ ಆರತಿ, ಕುಂಭಮೇಳ, ಡೊಳ್ಳು ಕುಣಿತ ಹಾಗೂ ವಿವಿಧ ವಾಧ್ಯಮೇಳದೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಪುರಸಭೆ ಸಾಂಸ್ಕೃತಿಕ ಭವನ ತಲುಪಿ ಸಮಾವೇಶಗೊಂಡಿತು.
ಹುಲಜಯಂತಿಯ ಮಾಳಿಂಗರಾಯ ಮಹಾರಾಜರು, ಆಲಮಟ್ಟಿಯ ವಶಿಷ್ಠ ಮುನಿಗಳು, ಲಖನಾಯಕನೊಪ್ಪದ ಕೃಷ್ಣಾನಂದ ಸ್ವಾಮೀಜಿ, ಹಳೇತೊರಗಲ್‌ನ ಕರಿಸಿದ್ದೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು. ಬೆಂಗಳೂರಿನ ಸುವರ್ಣಮುಖಿ ಧಾಮದ ಡಾ.ನಾಗರಾಜ ಹಾಗೂ ಸಾಹಿತಿ ಅರ್ಚನಾ ಕನಕದಾಸರ ಜೀವನ ಚರಿತ್ರೆ ಕುರಿತು ಉಪನ್ಯಾಸ ನೀಡಿದರು.
ಪ್ರದೇಶ ಕುರುಬರ ಸಂಘದ ತಾಲೂಕಾಧ್ಯಕ್ಷ ಪಡಿಯಪ್ಪ ಕ್ವಾರಿ ಅಧ್ಯಕ್ಷತೆ ವಹಿಸಿದ್ದರು. ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲ್ಲಣ್ಣ ಯಾದವಾಡ, ಕಟಕೋಳದ ಅಭಿನವ ಸಿದ್ದರಾಯ ಅಜ್ಜನವರು, ಕುರುಬರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶೋಕ ಮೆಟಗುಡ್ಡ, ಜಿಪಂ ಮಾಜಿ ಸದಸ್ಯ ರೇಣಪ್ಪ ಸೋಮಗೊಂಡ, ಎಪಿಎಂಸಿ ಮಾಜಿ ಅಧ್ಯಕ್ಷ ಎ್.ಎಸ್.ಕೊಂಗವಾಡ, ಕುರುಬರ ಸಂಘದ ಮಾಜಿ ಅಧ್ಯಕ್ಷ ವಿಠ್ಠಲ ಜಟಗನ್ನವರ, ಕೆಂಪಣ್ಣ ಕ್ವಾರಿ, ರವಿ ಮೊರಬದ, ಸಿದ್ದಪ್ಪ ಮಕ್ಕನ್ನವರ ಇತರರಿದ್ದರು.