ಕನಕಗಿರಿಯಲ್ಲಿ ರೈತರು ಕಂಗಾಲು

Untitled design(7)
ಕನಕಗಿರಿ ತಾಲೂಕಿನ ಉಮಳಿ ಕಾಟಾಪುರ ಗ್ರಾಮದ ಜಮೀನೊಂದರಲ್ಲಿ ಮಳೆ ನೀರು ನಿಂತಿರುವುದು.
Published on

ಕನಕಗಿರಿ: ತಾಲೂಕಿನಾದ್ಯಂತ ಬುಧವಾರ ಹಾಗೂ ಗುರುವಾರ ರಾತ್ರಿ ಸುರಿದ ಮಳೆಗೆ ತಗ್ಗು ಪ್ರದೇಶ, ಕೃಷಿ ಹೊಂಡ ಹಾಗೂ ಜಮೀನುಗಳಲ್ಲಿ ನೀರು ತುಂಬಿಕೊಂಡಿದೆ.

ಪಟ್ಟಣ ಹೊರೆತುಪಡಿಸಿ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಿದೆ. ಹಿರೇಖೆಡ, ಕರಡೋಣ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಹಳ್ಳಗಳು ತುಂಬಿ ಹರಿದಿವೆ. ಜಮೀನುಗಳಲ್ಲಿ ಮಳೆ ನೀರು ನಿಂತಿದ್ದರಿಂದ ಕೃಷಿ ಚಟುವಟಿಕೆಗೆ ತೊಂದರೆಯಾಗಿದೆಯಲ್ಲದೆ, ಕಟಾವು ಮಾಡಿ ಒಣಗಿಸಲು ಹಾಕಿದ್ದ ಫಸಲು ನೆನೆದಿದ್ದು, ರೈತರು ಕಂಗಾಲಾಗಿದ್ದಾರೆ.

ಉಮಳಿ ಕಾಟಾಪುರ ಭಾಗದಲ್ಲಿ ಮೆಕ್ಕೆಜೋಳ ಫಸಲು ಮಳೆಗೆ ಹಾಳಾಗಿದ್ದು, ಕೈಗೆ ಬಂದ ತುತ್ತು ಬಾಯಿಗೆ ಬರದಂತೆ ಆಗಿದೆ. ಸರ್ಕಾರ ನಷ್ಟ ಅನುಭವಿಸಿದ ರೈತರಿಗೆ ಪರಿಹಾರ ಒದಗಿಸುವಂತೆ ರೈತ ಪರ ಸಂಘಟನೆಗಳು ಆಗ್ರಹಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net