

ಕನಕಗಿರಿ: ಯುವಜನತೆ ಕೃಷಿ ರಕ್ಷಣೆಗೆ ಮುಂದಾಗಬೇಕು. ಇಲ್ಲದಿದ್ದರೆ ಒಕ್ಕಲುತನ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಕೃಷಿ ಇಲಾಖೆ ಉಪನಿರ್ದೇಶಕ ಸಹದೇವ ಯರಗೊಪ್ಪ ಕಳವಳ ವ್ಯಕ್ತಪಡಿಸಿದರು.
ಇಲ್ಲಿನ ಕರ್ನಾಟಕ ಪಬ್ಲಿಕ್ ಶಾಲೆಯ ಕಾಲೇಜು ವಿಭಾಗದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿದ್ದ ‘ನನ್ನ ಬೆಳೆ ನನ್ನ ಹಕ್ಕು’ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ವಾಸ್ತವದಲ್ಲಿ ರೈತರ ಬೆಳೆ ಸಮೀಕ್ಷೆ ಮಾಹಿತಿ ಡಿಜಿಟಲ್ ಮಾದರಿ ಒಳಗೊಂಡಿದೆ. ಗ್ರಾಮೀಣ ಭಾಗದ ಬಹುತೇಕ ರೈತರಿಗೆ ಗೊತ್ತಿಲ್ಲ. ಮನೆಯಲ್ಲಿರುವ ವಿದ್ಯಾವಂತರು ಮೊಬೈಲ್ ಮೂಲಕ ಬೆಳೆ ಸಮೀಕ್ಷೆ ಮಾಡಿಸಿ ಮಾಹಿತಿಯನ್ನು ಸರ್ಕಾರಕ್ಕೆ ರವಾನೆ ಮಾಡಬೇಕು. ಇದರಿಂದ ಕೃಷಿಗೆ ಸಹಕಾರ ನೀಡಿದಂತಾಗುತ್ತದೆ. ದೇಶದಲ್ಲೇ ಕರ್ನಾಟಕ ಮೊದಲ ಬಾರಿಗೆ ಕೃಷಿಯಲ್ಲಿ ಆಧುನಿಕ ತಂತ್ರಜ್ಞಾನದ ಮೂಲಕ ಬೆಳೆ ಸಮೀಕ್ಷೆ ಆ್ಯಪ್ ಸಿದ್ಧಪಡಿಸಿದ್ದು, ಸದುಪಯೋಗ ಪಡೆದುಕೊಳ್ಳಬೇಕು ಎದರು. ಕವಿ ಅಲ್ಲಾಗಿರಿರಾಜ ಮಾತನಾಡಿ, ವ್ಯವಸಾಯ ಅಭಿವೃದ್ಧಿ ಹೊಂದಬೇಕು.
ರೈತರ ಮಕ್ಕಳು ಕೃಷಿ ಕಡೆಗೆ ಗಮನ ಹರಿಸಬೇಕು ಎಂದು ಸಲಹ ನೀಡಿದರು. ಪ್ರಾಚಾರ್ಯ ಮಾರೆಪ್ಪ ಅಧ್ಯಕ್ಷತೆ ವಹಿಸಿದ್ದರು. ಕೃಷಿ ಅಧಿಕಾರಿ ನಾಗರಾಜ. ಎನ್.ಎಸ್.ತಾವರಗೇರಾ, ತಾಂತ್ರಿಕ ನಿರ್ವಾಹಕಿ ದೀಪ ಇತರರಿದ್ದರು.