ಅಂಬೇಡ್ಕರ್ ಮೂರ್ತಿಗೆ ಅಪಮಾನ ಸಲ್ಲದು

Untitled design (8)
ಕನಕಗಿರಿಯಲ್ಲಿ ತಹಸೀಲ್ದಾರ್ ವಿಶ್ವನಾಥ ಮುರುಡಿಗೆ ಡಿಎಸ್‌ಎಸ್ ಮನವಿ ಸಲ್ಲಿಸಿತು. ಜಿಲ್ಲಾ ಸಂಚಾಲಕ ವೆಂಕಟೇಶ ನಿರ್ಲೂಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ, ಜಿಪಂ ಮಾಜಿ ಸದಸ್ಯ ವಿರೇಶ ಸಮಗಂಡಿ, ಕಾಂಗ್ರೆಸ್ ವಕ್ತಾರ ಶರಣಪ್ಪ ಭತ್ತದ್ ಇತರರಿದ್ದರು.
Published on

ಕನಕಗಿರಿ: ಗಂಗಾವತಿಯಲ್ಲಿ ಅಂಬೇಡ್ಕರ್ ಮೂರ್ತಿಗೆ ಕಿಡಿಗೇಡಿಗಳು ಅವಮಾನ ಮಾಡಿರುವುದನ್ನು ಖಂಡಿಸಿ ದಲಿತ ಸಂಘರ್ಷ ತಾಲೂಕು ಸಮಿತಿ ಮಂಗಳವಾರ ತಹಸೀಲ್ದಾರ್ ವಿಶ್ವನಾಥ ಮುರುಡಿಗೆ ಮನವಿ ಸಲ್ಲಿಸಿತು.

ಶಾಂತಿ ಕದಡುವ ಕೃತ್ಯ

ಗಂಗಾವತಿಯಲ್ಲಿ ಅಂಬೇಡ್ಕರ್ ಮೂರ್ತಿಗೆ ರಾತ್ರೋರಾತ್ರಿ ಟೊಮ್ಯಾಟೊ ಸಾಸ್ ಎರಚಿ ಅಪಮಾನ ಮಾಡಿದ್ದಾರೆ. ಶಾಂತಿ ಕದಡುವ ಕೃತ್ಯ ಇದಾಗಿದೆ. ಅನತಿ ದೂರದಲ್ಲಿ ಪೊಲೀಸ್ ಠಾಣೆಯಿದ್ದರೂ ಕೃತ್ಯ ಮಾಡಲಾಗಿದೆ. ತಪ್ಪಿಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಂಘಟನೆಯ ಜಿಲ್ಲಾ ಸಂಚಾಲಕ ವೆಂಕಟೇಶ ನಿರ್ಲೂಟಿ ಆಗ್ರಹಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ, ಜಿಪಂ ಮಾಜಿ ಸದಸ್ಯ ವೀರೇಶ ಸಮಗಂಡಿ, ಕಾಂಗ್ರೆಸ್ ವಕ್ತಾರ ಶರಣಪ್ಪ ಭತ್ತದ್, ಪ್ರಮುಖರಾದ ಪ್ರಶಾಂತ ಪ್ರಭುಶೆಟ್ಟರ್, ಗುರುಸಿದ್ದಪ್ಪ ಹಾದಿಮನಿ, ದಲಿತಪರ ಸಂಘಟನೆಗಳ ಪದಾಧಿಕಾರಿಗಳಾದ ಪಾಮಣ್ಣ ಅರಳಿಗನೂರು, ಕನಕಪ್ಪ ಸೂಳೇಕಲ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net