ರಾಜ್ಯದಲ್ಲಿ ಕಮಲ ಅರಳಿಸಿದ್ದು ಬಿಎಸ್‌ವೈ

birthday celebration
ಬಿ.ಎಸ್. ಯಡಿಯೂರಪ್ಪ ಜನ್ಮದಿನದ ನಿಮಿತ್ತ ಕನಕಗಿರಿ ಬಿಜೆಪಿ ಮಂಡಲ ಕಚೇರಿಯಲ್ಲಿ ಗುರುವಾರ ಜಿಲ್ಲಾಧ್ಯಕ್ಷ ಬಸವರಾಜ ದಢೇಸುಗೂರು ಕೇಕ್ ಕತ್ತರಿಸಿದರು. ಮುಖಂಡರಾದ ರಂಗಪ್ಪ ಕೊರಗಟಗಿ, ನಾಗರಾಜ್ ಬಾವಿಕಟ್ಟಿ, ಅರುಣ್ ಬಿ., ನಾಗರಾಜ್ ವಾಲೇಕಾರ್, ಮಂಜುನಾಥ್ ಮ್ಯಾಗಡೆ, ಉಮೇಶ್ ಮ್ಯಾಗಡೆ ಇತರರಿದ್ದರು.
Published on

ಕನಕಗಿರಿ: ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಬಿಜೆಪಿಯನ್ನು ಆಡಳಿತಕ್ಕೆ ತಂದ ಕೀರ್ತಿ ಧೀಮಂತ ನಾಯಕ ಬಿ.ಎಸ್. ಯಡಿಯೂರಪ್ಪಗೆ ಸಲ್ಲುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಇಲ್ಲಿನ ನವಲಿ ರಸ್ತೆಯ ಬಿಜೆಪಿ ಮಂಡಲ ಕಚೇರಿಯಲ್ಲಿ ಗುರುವಾರ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪನವರ ಜನ್ಮದಿನಾಚರಣೆ ನಿಮಿತ್ತ ಕೇಕ್ ಕತ್ತರಿಸಿ ಮಾತನಾಡಿದರು. ಯಡಿಯೂರಪ್ಪ ಅವರು ಕಾಲೇಜು ದಿನಗಳಲ್ಲೇ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯರಾಗಿದ್ದರು. 1970ರಲ್ಲಿ ಆರ್‌ಎಸ್‌ಎಸ್ ಶಿಕಾರಿಪುರ ಘಟಕದ ಕಾರ್ಯವಾಹರಾಗಿ ನೇಮಕಗೊಳ್ಳುವ ಮೂಲಕ ಸಾರ್ವಜನಿಕ ಜೀವನ ಪ್ರವೇಶಿಸಿದರು.

ಜನಸಂಘದ ಶಿಕಾರಿಪುರ ತಾಲೂಕು ಅಧ್ಯಕರಾಗಿಯೂ ನೇಮಕಗೊಂಡರು. ನಂತರ 1972ರಲ್ಲಿ ಶಿಕಾರಿಪುರ ನಗರ ಪಾಲಿಕೆಗೆ ಚುನಾಯಿತರಾಗಿದ್ದರು. 1988ರಲ್ಲಿ ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡರು. 1983ರಲ್ಲಿ ಶಿಕಾರಿಪುರದಿಂದ ಗೆದ್ದು ಶಾಸಕರಾಗಿ ವಿಧಾನಸಭೆ ಪ್ರವೇಶಿಸಿದರು. ಒಟ್ಟು ಆರು ಬಾರಿ ಶಿಕಾರಿಪುರ ಕ್ಷೇತ್ರದ ಶಾಸಕರಾಗಿದ್ದಾರೆ. 2008ರ ವಿಧಾನಸಭಾ ಚುನಾವಣೆಯಲ್ಲಿ ಶಿಕಾರಿಪುರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ರಾಜ್ಯದಲ್ಲಿ ಬಿಜೆಪಿ ಸರ್ಕಾರವನ್ನು ರಚಿಸಿದರು ಎಂದು ತಿಳಿಸಿದರು.

ಕನಕಗಿರಿ ಮಂಡಲ ಅಧ್ಯಕ್ಷ ಸಣ್ಣ ಕನಕಪ್ಪ, ನಿಕಟಪೂರ್ವ ಅಧ್ಯಕ್ಷ ಮಹಾಂತೇಶ್ ಸಜ್ಜನ್, ಜಿಲ್ಲಾ ಉಪಾಧ್ಯಕ್ಷ ವಾಗೇಶ್ ಹಿರೇಮಠ, ಪ್ರಧಾನ ಕಾರ್ಯದರ್ಶಿಗಳಾದ ಗ್ಯಾನಪ್ಪ ಗಾಣದಾಳ, ಪ್ರಕಾಶ ಹಾದಿಮನಿ, ಮಂಡಲ ಉಪಾಧ್ಯಕ್ಷ ಕನಕಪ್ಪ ಯಾದವ್, ಯುವ ಮೊರ್ಚಾ ಪ್ರಧಾನ ಕಾರ್ಯದರ್ಶಿಗಳಾದ ವಿನಾಯಕ ಚಿತ್ತರಕಿ, ಪೃಥ್ವಿ ಮ್ಯಾಗೇರಿ, ಎಸ್ಸಿ ಮೋರ್ಚಾ ಅಧ್ಯಕ್ಷ ಸುಭಾಷ್ ಕಂದಕೂರು, ಎಸ್ಟಿ ಮೋರ್ಚಾ ಅಧ್ಯಕ್ಷ ಪಂಪನಗೌಡ ಆಕಳಕುಂಪಿ, ಪ್ರಧಾನ ಕಾರ್ಯದರ್ಶಿ ರಂಗಪ್ಪ ನಾಯಕ, ಒಬಿಸಿ ಮೋರ್ಚಾ ಅಧ್ಯಕ್ಷ ಹರೀಶ್ ಪೂಜಾರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಜಿಲ್ಲಾ ಸಾಮಾಜಿಕ ಜಾಲತಾಣ ಸಂಚಾಲಕ ಮಂಜುನಾಥ್ ಯತ್ನಟ್ಟಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net