ಜಾತಿ ಲೆಕ್ಕಾಚಾರದಲ್ಲಿ ತಪ್ಪಿದ ಸಚಿವ ಸ್ಥಾನ; ಶಾಸಕ ಬಸವರಾಜ ದಢೇಸುಗೂರು ಹೇಳಿಕೆ

10082021 Basavarja Dhadesugur
Published on

ನಿಗಮ, ಮಂಡಳಿ ಅಧ್ಯಕ್ಷ ಸ್ಥಾನದ ವಿಶ್ವಾಸ

ಕನಕಗಿರಿ: ಮುಂದಿನ ದಿನಗಳಲ್ಲಿ ನನಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ದೊರೆಯುವ ಭರವಸೆಯಿದೆ ಎಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯನ್ನು ಭೇಟಿ ಮಾಡಿ ಮನವಿ ಮಾಡಿದ್ದೆ. ಆದರೆ ಜಾತಿ ಲೆಕ್ಕಚಾರದಲ್ಲಿ ನನಗೆ ಸಚಿವ ಸ್ಥಾನ ಕೈತಪ್ಪಿದೆ. ಯಲಬುರ್ಗಾ ಶಾಸಕ ಹಾಲಪ್ಪ ಆಚಾರ್‌ಗೆ ಸಚಿವ ಸ್ಥಾನ ನೀಡಿರುವುದನ್ನು ಸ್ವಾಗತಿಸುತ್ತೇನೆ. ಬಸವರಾಜ ಬೊಮ್ಮಾಯಿ ಉತ್ತಮ ಆಡಳಿತ ನೀಡುವ ನಿರೀಕ್ಷೆ ಇದೆ ಎಂದರು.

ನವಲಿಯಲ್ಲಿ ನಿರ್ಮಿಸಲಾಗಿರುವ ಪಿಯುಸಿ ಕಾಲೇಜು, ಸಮುದಾಯ ಆರೋಗ್ಯ ಕೇಂದ್ರದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆಯನ್ನು ಗಣಿ-ಭೂ ವಿಜ್ಞಾನ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಮೂಲಕ ನೆರವೇರಿಸುವ ಉದ್ದೇಶವಿದೆ. ಈ ಕುರಿತು ಶೀಘ್ರ ದಿನಾಂಕ ನಿಗದಿ ಮಾಡಲಾಗುವುದು ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net