ಮಹಿಳಾ ಮತದಾರರನ್ನು ಸೆಳೆಯಿರಿ; ಹೇಮಲತಾ ನಾಯಕ ಸಲಹೆ

01082021 Kanakagiri BJP Meeting
Published on

ಮಂಡಲ ಮೋರ್ಚಾ ಕಾರ್ಯಕಾರಿಣಿ

ಕನಕಗಿರಿ: ಬಿಜೆಪಿಯನ್ನು ತಳಮಟ್ಟದಲ್ಲಿ ಇನ್ನಷ್ಟು ಗಟ್ಟಿಗೊಳಿಸಲು ಮಹಿಳಾ ಮತದಾರರನ್ನು ಸೆಳೆಯುವುದು ಅವಶ್ಯವಾಗಿದೆ. ಇದಕ್ಕಾಗಿ ಪಕ್ಷದ ಕಾರ್ಯಕರ್ತೆಯರು ಸಂಘಟನೆಯಲ್ಲಿ ತೊಡಗಿಸಿಕೊಳ್ಳಬೇಕೆಂದು ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಹೇಮಲತಾ ನಾಯಕ ಹೇಳಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಮಂಡಲ ಮಹಿಳಾ ಮೋರ್ಚಾ ಕಾರ್ಯಕಾರಣಿಯಲ್ಲಿ ಮಾತನಾಡಿದರು. ನೂತನ ಮುಖ್ಯಮಂತ್ರಿಯಿಂದ ಹೊಸ ಯೋಜನೆಗಳು ಜಾರಿಯಾಗುವ ನಿರೀಕ್ಷೆ ಇದೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಯೋಜನೆಗಳನ್ನು ಜನರಿಗೆ ತಿಳಿಸಿ ಜಿಪಂ ಹಾಗೂ ತಾಪಂ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದರು.

ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ವಾಣಿಶ್ರೀ ಹಿರೇಮಠ, ಕಾರ್ಯದರ್ಶಿ ಜಯಶ್ರೀ ಗೊಂಡಬಾಳ, ಮಂಡಲ ಅಧ್ಯಕ್ಷೆ ಹುಲಿಗೆಮ್ಮ ನಾಯಕ, ಪ್ರಧಾನ ಕಾರ್ಯದರ್ಶಿ ಈರಮ್ಮ ಯಾದವ್, ಸದಸ್ಯೆಯರಾದ ವನಜಾಕ್ಷಿ, ಶರಣಮ್ಮ, ವಿಶಾಲಾಕ್ಷಮ್ಮ, ಸುಭದ್ರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net