

ಕನಕಗಿರಿ: ಪಪಂನಲ್ಲಿ ಕಾಂಗ್ರೆಸ್ ಅಧಿಕಾರ ಪಡೆಯಲು ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಪ್ರತಿಯೊಬ್ಬ ಕಾರ್ಯಕರ್ತರು ಶ್ರಮಿಸಬೇಕೆಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಶಿವರಾಜ ತಂಗಡಗಿ ಹೇಳಿದರು.
ಪಟ್ಟಣದ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಹಲವು ವಾರ್ಡ್‌ಗಳಲ್ಲಿ ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿನ ಆಕಾಂಕ್ಷಿಗಳಿದ್ದಾರೆ. ಪಕ್ಷದ ವೇದಿಕೆಯಲ್ಲಿ ಚರ್ಚಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಟಿಕೆಟ್ ನೀಡಲಾಗುವುದು. ಪಕ್ಷ ಟಿಕೆಟ್ ನೀಡುವ ಅಭ್ಯರ್ಥಿಗಳ ಗೆಲುವಿಗೆ ಕಾರ್ಯಕರ್ತರು, ಮುಖಂಡರು ಶ್ರಮಿಸುವಂತೆ ಸೂಚಿಸಿದರು.
ಕನಕಗಿರಿ ಪಪಂ ಆಗಿ ಮೆಲ್ದರ್ಜೆಗೆ, ತಾಲೂಕು ಕೇಂದ್ರ ರಚನೆ, ಉತ್ಸವ ಹಾಗೂ ಹಲವು ಅಭಿವೃದ್ಧಿ ಕಾರ್ಯಗಳು ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಹಕರಿಯಾಗಲಿವೆ ಎಂದರು. ಬ್ಲಾಕ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ ಮಾತನಾಡಿ, ಬಿಜೆಪಿಯ ದುರಾಡಳಿತ ಹಾಗೂ ಬೆಲೆ ಏರಿಕೆ ನೀತಿಗೆ ಜನ ಬೇಸತ್ತಿದ್ದಾರೆ. ಕಾಂಗ್ರೆಸ್ ಸಾಮಾಜಿಕ ನ್ಯಾಯ ಹಾಗೂ ಜನಪರ ಆಡಳಿತ ನೀಡಿದೆ. ಈ ಬಾರಿಯ ಪಪಂ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿಯುವುದು ನಿಶ್ಚಿತ ಎಂದರು.