ಎಲ್ಲ ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತರ ಗೆಲುವು

22112021 Kanakagiri Congress suppoters victory
Published on


ಹುಲಿಹೈದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕ್ ಚುನಾವಣೆ


ಕನಕಗಿರಿ: ತಾಲೂಕಿನ ಹುಲಿಹೈದರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಬ್ಯಾಂಕಿನ 11 ನಿರ್ದೇಶಕ ಸ್ಥಾನಗಳಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರಾಬಲ್ಯ ಮೆರೆದಿದೆ. ಎಲ್ಲ ಸ್ಥಾನಗಳಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳೇ ಗೆಲುವು ಸಾಧಿಸಿದ್ದಾರೆ.

11 ಸ್ಥಾನಗಳಿಗೆ 22 ಅಭ್ಯರ್ಥಿಗಳು ಕಣದಲ್ಲಿದ್ದರು. ಭಾನುವಾರ ಸಂಜೆ 4ರವರೆಗೆ ಮತದಾನ ನಡೆಯಿತು. ನಂತರ ನಡೆದ ಮತ ಎಣಿಕೆ ನಡೆಯಿತು. ಕಾಂಗ್ರೆಸ್ ಬೆಂಬಲಿತರು ಗೆಲುವು ಸಾಧಿಸುತ್ತಿದ್ದಂತೆ ಬೆಂಬಲಿಗರು ವಿಜಯೋತ್ಸವ ಆಚರಿಸಿದರು. ಕ್ಷೇತ್ರದ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಪ್ರಮುಖರಾದ ಅಮರಪ್ಪ ಗದ್ದಿ ಇತರರಿದ್ದರು.

ಆಯ್ಕೆಯಾದವರು: ಹನುಮಂತಪ್ಪ ಬೇವಿನಗಿಡ, ಹನುಮಂತಪ್ಪ ಗೋಡಿ, ಅಮೀನಸಾಬ್, ರಾಜ ಮಹ್ಮದಸಾಬ್, ಛಾಯಪ್ಪ, ಮಾರೆಪ್ಪ, ದುರಗಪ್ಪ, ಅಮರಪ್ಪ, ಸಣ್ಣ ಹನುಮಂತಪ್ಪ, ಮೈಬುಸಾಬ್, ಶಂಕ್ರಮ್ಮ ಹೊಸಗುಡ್ಡ, ನಿಂಗಮ್ಮ ಸೋಮಪ್ಪ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net