ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳಿ

Kanakagiri Dalit awareness meeting
ಕನಕಗಿರಿಯಲ್ಲಿ ಆಯೋಜಿಸಿದ್ದ ದಲಿತ ಜಾಗೃತಿ ಸಭೆಯಲ್ಲಿ ಪಿಐ ಎಂ.ಡಿ ಪೈಜುಲ್ಲಾ ಮಾತನಾಡಿದರು. ಪ್ರಮುಖರಾದ ಪಾಮಣ್ಣ ಅರಳಿಗನೂರ, ರವಿ ಭಜಂತ್ರಿ , ಉಮೇಶ ಮ್ಯಾಗಡೆ, ಪೇದೆ ಸಿದ್ರಾಮಪ್ಪ ಕೊಪ್ಪಳ ಇತರರಿದ್ದರು.
Published on

ಕನಕಗಿರಿ: ಹೋಟೆಲ್, ಖಾನಾವಳಿ ಸೇರಿದಂತೆ ನಾನಾ ಅಂಗಡಿ ಮುಂಗಟ್ಟುಗಳಲ್ಲಿ ಅಸ್ಪೃಶ್ಯತೆ ಆಚರಣೆ ನಿಷೇಧಿಸಲಾಗಿದೆ ಎಂದು ಪಿಐ ಎಂ.ಡಿ ಪೈಜುಲ್ಲಾ ಹೇಳಿದರು.

ಪಟ್ಟಣದ ಹಳೇ ಪೊಲೀಸ್ ಠಾಣೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ದಲಿತ ಜಾಗೃತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

ತಾಲೂಕಿನಾದ್ಯಂತ ದಲಿತ ವಿರೋಧಿ ಚಟುವಟಿಕೆಗಳಿಗೆ ಆಸ್ಪದ ನೀಡದೆ ನಾವೆಲ್ಲರೂ ಒಂದೇ ಎನ್ನುವ ಮನೋಭಾವದೊಂದಿಗೆ ಜೀವನ ಸಾಗಿಸಬೇಕು. ಸಮಾಜದಲ್ಲಿ ಯಾವ ಜಾತಿ ದೊಡ್ಡದಲ್ಲ. ಶಾಂತಿಯುತ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಂಡು ಬದುಕಿದಾಗ ಸಮಾಜದಲ್ಲಿ ಏಕತೆ ಮೂಡಲಿದೆ ಎಂದರು.

ಗ್ರಾಮಗಳಲ್ಲಿ ಅಸ್ಪೃಶ್ಯತೆ ಆಚರಣೆ ಕಂಡು ಬಂದರೆ ತಕ್ಷಣ ಠಾಣೆಗೆ ಮಾಹಿತಿ ನೀಡಿದರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ.ಪಂ ಉಪಾಧ್ಯಕ್ಷ ಕಂಠಿರಂಗಪ್ಪ ನಾಯಕ, ಸದಸ್ಯರಾದ ಹನುಮಂತ ಬಸರಿಗಿಡದ, ಶೇಷಪ್ಪ ಪೂಜಾರ, ಗ್ರಾಮ ಆಡಳಿತಾಧಿಕಾರಿ ಶಿವರಾಜ, ಪ.ಪಂ ಕರವಸೂಲಿಗಾರ ಪ್ರಕಾಶ ಮಹಿಪತಿ, ಸಮಾಜ ಕಲ್ಯಾಣ ಇಲಾಖೆಯ ವೀರೇಶ ಚಕ್ರಸಾಲಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net