ಶ್ರೀ ಭೋಗಾಪುರೇಶ ರಥೋತ್ಸವ ಅದ್ದೂರಿ

RATHOTHAVA
ಕನಕಗಿರಿ ತಾಲೂಕಿನ ನವಲಿ ಗ್ರಾಮದ ಐತಿಹಾಸಿಕ ಶ್ರೀ ಭೋಗಾಪುರೇಶ್ವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸೋಮವಾರ ಅದ್ದೂರಿಯಾಗಿ ಜರುಗಿತು.
Published on

ಕನಕಗಿರಿ: ಭಿನ್ನವಾದ ಮೂರ್ತಿ ಪೂಜೆಗೊಳ್ಳುವ ತಾಲೂಕಿನ ನವಲಿ ಗ್ರಾಮದ ಐತಿಹಾಸಿಕ ಶ್ರೀ ಭೋಗಾಪುರೇಶ ದೇವರ ಜಾತ್ರಾ ಮಹೋತ್ಸವ ನಿಮಿತ್ತ ಸೋಮವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿ ರಥೋತ್ಸವ ಜರುಗಿತು.

ರಥೋತ್ಸವ ನಿಮಿತ್ತ ದೇವಸ್ಥಾನದಲ್ಲಿ ಬೆಳಗ್ಗೆ ಶ್ರೀಸ್ವಾಮಿಗೆ ಪೂಜಾ ಕಾರ್ಯಕ್ರಮಗಳು ನೆರವೇರಿದವು. ಮಧ್ಯಾಹ್ನ ಭಕ್ತರಿಗೆ ದೇವರ ಸನ್ನಿಧಿಯಲ್ಲಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ಸರ್ವಾಲಂಕೃತ ರಥವನ್ನು ನೆರೆದಿದ್ದ ಭಕ್ತರು ಹರ್ಷೋದ್ಗಾರದೊಂದಿಗೆ ಪಾದಗಟ್ಟೆವರೆಗೆ ಎಳೆದು ಬಳಿಕ ಮೂಲ ಸ್ಥಾನಕ್ಕೆ ತಲುಪಿಸಿದರು. ತೇರಿನ ಕಲಶಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು.

ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ, ಮಂಡಲ ಅಧ್ಯಕ್ಷ ಜಡಿಯಪ್ಪ ಮುಕ್ಕುಂದಿ, ಪ್ರಮುಖರಾದ ವಿರುಪಣ್ಣ ಕಲ್ಲೂರು, ಗ್ರಾಪಂ ಅಧ್ಯಕ್ಷೆ ಮಹದೇವಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net