ಧರ್ಮಸ್ಥಳ ಆಸ್ಪತ್ರೆಯಲ್ಲಿ ಚಿಕಿತ್ಸೆ

Kanakagiri eye test
ಕನಕಗಿರಿ ತಾಲೂಕಿನ ಬಸರಿಹಾಳದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ದೃಷ್ಟಿ ದೋಷ ಇದ್ದವರಿಗೆ ಯೋಜನಾಧಿಕಾರಿ ನಿಂಗಪ್ಪ ಅಗಸರ ಕನ್ನಡಕ ವಿತರಿಸಿದರು. ಗ್ರಾಪಂ ಮಾಜಿ ಉಪಾಧ್ಯಕ್ಷ ಶಿವಪ್ಪ ಇತರರಿದ್ದರು.
Published on

ಕನಕಗಿರಿ: ಬಸರಿಹಾಳ ಗ್ರಾಮದಲ್ಲಿ ನಡೆದ ಆರೋಗ್ಯ ಹಾಗೂ ಕಣ್ಣಿನ ಉಚಿತ ತಪಾಸಣೆ ಶಿಬಿರದಲ್ಲಿ ದೃಷ್ಟಿ ದೋಷ ಉಂಟಾದ 11 ವಯೋವೃದ್ಧರಿಗೆ ಕನ್ನಡಕ ವಿತರಿಸಲಾಗಿದೆ ಎಂದು ಕನಕಗಿರಿ-ಕಾರಟಗಿ ತಾಲೂಕು ಯೋಜನಾಧಿಕಾರಿ ನಿಂಗಪ್ಪ ಅಗಸರ ಹೇಳಿದರು.

ತಾಲೂಕಿನ ಬಸರಿಹಾಳ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಕಾರ್ಯಕ್ರಮದಡಿ ಇತ್ತೀಚೆಗೆ ಹಮ್ಮಿಕೊಂಡಿದ್ದ ಉಚಿತ ಉಚಿತ ಕಣ್ಣಿನ ತಪಾಸಣೆ ಶಿಬಿರದಲ್ಲಿ ದೃಷ್ಟಿ ದೋಷ ಉಂಟಾದವರಿಗೆ ಕನ್ನಡಕ ವಿತರಿಸಿ ಮಾತನಾಡಿದರು. ಅಗತ್ಯ ಇರುವ ಹಾಗೂ ದೊಡ್ಡ ಕಾಯಿಲೆಗಳಿಗೆ ತುತ್ತಾಗಿರುವ ರೋಗಿಗಳಿಗೆ ನಿಯಮಾನುಸಾರ ಧರ್ಮಸ್ಥಳ ಸಂಸ್ಥೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ವ-ಸಹಾಯ ಸಂಘದ ಮಹಿಳೆಯರು, ಕುಟುಂಬಸ್ಥರು ಸದ್ಬಳಕೆ ಮಾಡಿಕೊಳ್ಳಿ ಎಂದರು. ಗ್ರಾಪಂ ಮಾಜಿ ಉಪಾಧ್ಯಕ್ಷ ಶಿವಪ್ಪ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net