ಗಾಂಧೀಜಿಯವರ ಕನಸು ಸ್ವಚ್ಛತೆಯೇ ದೈವತ್ವ ಪರಿಕಲ್ಪನೆ

Sulekal Cleaning
ಕನಕಗಿರಿ ತಾಲೂಕಿನ ಸುಳೇಕಲ್ ಗ್ರಾಪಂ ಆವರಣದಲ್ಲಿ ಸ್ವಚ್ಛತಾ ಹೀ ಸೇವಾ ಅಂಗವಾಗಿ ತಾಪಂ ಇಒ ರಾಜಶೇಖರ ಕಸಗೂಡಿಸಿದರು.
Published on

ಕನಕಗಿರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಕನಸಾದ ಸ್ವಚ್ಛತೆಯೇ ದೈವತ್ವ ಪರಿಕಲ್ಪನೆ ಈಡೇರಿಸಲು ಸೆ.14 ರಿಂದ ಅ.02 ರವರೆಗೆ ತಾಲೂಕಿನ ಎಲ್ಲ ಗ್ರಾಮಗಳಲ್ಲಿ ಸ್ವಚ್ಛತಾ ಹೀ ಸೇವಾ (ಸ್ವಚ್ಛತೆಯೇ ಸೇವೆ) ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಕೆ.ರಾಜಶೇಖರ ಹೇಳಿದರು.

ತಾಲೂಕಿನ ಸುಳೇಕಲ್ ಗ್ರಾಪಂ ಆವರಣದಲ್ಲಿ ಶನಿವಾರ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮ ನಿಮಿತ್ತ ಹಮ್ಮಿಕೊಂಡಿದ್ದ ಶ್ರಮದಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಅ.2ರ ಗಾಂಧೀಜಿ ಜನ್ಮದಿನವನ್ನು ಸ್ವಚ್ಛ ಭಾರತ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದು ತಿಳಿಸಿದರು.

ಕಳೆದ ವರ್ಷದಂತೆಯೇ ಗ್ರಾಮಗಳ ಸ್ವಚ್ಛತೆಗೆ ಸ್ವಯಂಪ್ರೇರಿತರಾಗಿ ಶ್ರಮದಾನ ಚಟುವಟಿಕೆಗಳಲ್ಲಿ ಭಾಗವಹಿಸುವುದು. ತಾಲೂಕಿನ ಗ್ರಾಪಂ ವ್ಯಾಪ್ತಿಗಳ ಸಾರ್ವಜನಿಕ ಸ್ಥಳಗಳಾದ ಬಸ್ ನಿಲ್ದಾಣ, ಕೆರೆ, ಹಳ್ಳ, ಸಮುದಾಯ ಭವನ, ಪ್ರವಾಸಿ ತಾಣಗಳು, ಐತಿಹಾಸಿಕ ಸ್ಮಾರಕಗಳು, ಚರಂಡಿಗಳು ಮತ್ತು ನಾಲೆಗಳು ಮುಂತಾದ ಸ್ಥಳಗಳಲ್ಲಿ ಶ್ರಮದಾನ ನಡೆಸಿ ಸ್ವಚ್ಛತೆ ಕೈಗೊಳ್ಳುವ ಮೂಲಕ ಏಕ ಬಳಕೆ ಪ್ಲಾಸ್ಟಿಕ್ ವಸ್ತುಗಳ ಬಳಕೆ ನಿಷೇಧ ಕುರಿತು ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು. ಗ್ರಾಪಂ ಪಿಡಿಒ ಹನುಮಂತಪ್ಪ, ಅಧ್ಯಕ್ಷೆ ಕವಿತಾ, ಸದಸ್ಯರು ಹಾಗೂ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net