5.32 ಲಕ್ಷ ರೂ. ಪರಿಹಾರ ವಿತರಣೆ

relief distribution,
ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದಲ್ಲಿ ಸಿಡಿಲು ಬಡಿದು ಮೃತಪಟ್ಟಿದ್ದ ಯಂಕಪ್ಪ ಜಾಡಿ ಕುಟುಂಬಸ್ಥರಿಗೆ ಸಚಿವ ಶಿವರಾಜ ತಂಗಡಗಿ ಪರಿಹಾರ ಆದೇಶದ ಪ್ರತಿ ವಿತರಿಸಿದರು. ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾಪಂ ಇಒ ರಾಜಶೇಖರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲುಮಠ, ತಾಪಂ ಮಾಜಿ ಅಧ್ಯಕ್ಷ ಬಸವಂತಗೌಡ ಇತರರಿದ್ದರು.
Published on

ಕನಕಗಿರಿ: ಜಮೀನಿನಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದು ಸಾವನ್ನಪ್ಪಿದ ತಾಲೂಕಿನ ಹುಲಿಹೈದರ ಗ್ರಾಮದ ಯಂಕಪ್ಪ ಜಾಡಿ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಶನಿವಾರ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಯಂಕಪ್ಪ ಅವರ ಸಾವಿಗೆ 5 ಲಕ್ಷ ರೂ. ಹಾಗೂ ಎತ್ತು ಸತ್ತಿದ್ದಕ್ಕೆ 32 ಸಾವಿರ ರೂ. ಸೇರಿ ಒಟ್ಟು 5.32 ಲಕ್ಷ ರೂ. ಕೆ-2 ಪೋರ್ಟಲ್ ಮೂಲಕ ಕುಟುಂಬಸ್ಥರಿಗೆ ಪರಿಹಾರ ಧನ ವರ್ಗಾಯಿಸಲಾಗಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ತಹಸೀಲ್ದಾರ್ ವಿಶ್ವನಾಥ ಮುರುಡಿ, ತಾಪಂ ಇಒ ರಾಜಶೇಖರ, ತಾಪಂ ಮಾಜಿ ಅಧ್ಯಕ್ಷ ಬಸವಂತಗೌಡ, ಪ್ರಚಾರ ಸಮಿತಿ ಅಧ್ಯಕ್ಷ ರಮೇಶ ನಾಯಕ, ಪ್ರಮುಖರಾದ ಅಶೋಕ ಜಾಡಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net