ಸೌಕರ್ಯ ಕಲ್ಪಿಸದಿದ್ದರೆ ವಾರ್ಡನ್ ವಿರುದ್ಧ ಕ್ರಮ, ಲೋಕಾಯುಕ್ತ ಇನ್ಸ್‌ಪೆಕ್ಟರ್ ಶೈಲಾ ಪಾಟೀಲ್ ಹೇಳಿಕೆ

Lokayukta Inspector, visits
ಕನಕಗಿರಿಯ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಲೋಕಾಯುಕ್ತ ಇನ್ಸ್‌ಪೆಕ್ಟರ್ ಶೈಲಾ ಪಾಟೀಲ್, ಪೇದೆ ಗವಿಕುಮಾರ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
Published on

ಕನಕಗಿರಿ: ಪಟ್ಟಣದ ಎಪಿಎಂಸಿ ವ್ಯಾಪ್ತಿಯ ಖಾಸಗಿ ಕಟ್ಟಡದಲ್ಲಿ ನಡೆಯುತ್ತಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಮಂಗಳವಾರ ಲೋಕಾಯುಕ್ತ ಇನ್ಸ್‌ಪೆಕ್ಟರ್ ಶೈಲಾ ಪಾಟೀಲ್ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿನ ಪರಿಶಿಷ್ಟ ಜಾತಿ ವಸತಿ ನಿಲಯಗಳಿಗೆ ಭೇಟಿ ನೀಡಿ, ಅಲ್ಲಿರುವ ಮೂಲ ಸೌಲಭ್ಯ ಹಾಗೂ ವ್ಯವಸ್ಥೆ ಕುರಿತು ಮಾಹಿತಿ ನೀಡುವಂತೆ ಮೇಲಧಿಕಾರಿಗಳ ಆದೇಶವಿದೆ. ಅದರಂತೆ ಜಿಲ್ಲಾ ವ್ಯಾಪ್ತಿಯ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುತ್ತಿದೆ.

ನಿಲಯಗಳಲ್ಲಿ ಊಟ, ಉಪಹಾರ, ಕುಡಿವ ನೀರು, ಬೆಳಕಿನ ವ್ಯವಸ್ಥೆ ಸೇರಿ ಇತರ ಮೂಲ ಸೌಕರ್ಯಗಳಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಬಾರದು. ಒಂದು ವೇಳೆ ಸಮಸ್ಯೆ ಕಂಡು ಬಂದಲ್ಲಿ ಅಂಥಹ ವಾರ್ಡನ್‌ಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಈ ವಸತಿ ನಿಲಯಕ್ಕೆ ಭೇಟಿ ನೀಡಿದ ವೇಳೆ ವಾರ್ಡನ್ ಇರಲಿಲ್ಲ. ನಿಲಯದಲ್ಲಿನ ಸಹಾಯಕ ಹಾಗೂ ಅಡುಗೆ ಸಿಬ್ಬಂದಿಯಿಂದ ಮಾಹಿತಿ ಪಡೆದುಕೊಂಡರು. ಹಾಸ್ಟೆಲ್ ಸಿಬ್ಬಂದಿ ದೊಡ್ಡಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net