ಫಲಿತಾಂಶ ಸುಧಾರಣೆಗೆ ಕ್ರಮ ವಹಿಸಿ

Untitled design (5)
Published on

ಕನಕಗಿರಿ: ಇಲ್ಲಿನ ಪರಿಶಿಷ್ಟ ಜಾತಿ ಮುರಾರ್ಜಿ ದೇಸಾಯಿ ವಸತಿ ಶಾಲೆಗೆ ಜಿಲ್ಲಾ ಲೋಕಾಯುಕ್ತ ಪೊಲೀಸ್ ಅಧಿಕಾರಿ ನಾಗರತ್ನಾ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ನಿಲಯದಲ್ಲಿ ಊಟದ ರುಚಿ, ಶುಚಿ, ವಿದ್ಯಾಭ್ಯಾಸ, ಫಲಿತಾಂಶ ಕುರಿತು ಮಕ್ಕಳಿಂದ ಮಾಹಿತಿ ಪಡೆದ ಅವರು, ಮೆಚ್ಚುಗೆ ವ್ಯಕ್ತಪಡಿಸಿದರು. ಇದಕ್ಕೂ ಮೊದಲು ದಾಸ್ತಾನು ಕೊಠಡಿ, ಬಾಲಕ/ಬಾಕಿಯರ ವಸತಿ ನಿಲಯಗಳ ವೀಕ್ಷಿಸಿದರು. ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಓದಿನಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ ಶಾಲಾ ಫಲಿತಾಂಶ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಶಿಕ್ಷಕರಿಗೆ ಸಲಹೆ ನೀಡಿದರು. ಶಾಲೆಯ ಪ್ರಾಚಾರ್ಯ ರಾಜು ಮಡ್ಡಿ, ಶಿಕ್ಷಕರು ಹಾಗೂ ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net