ಪಂಚ ಗ್ಯಾರಂಟಿಗಳಿಂದ ಹೊರಗುಳಿಯದಿರಲಿ

knk1
ಕನಕಗಿರಿ ತಾಲೂಕಿನ ನವಲಿ ಗ್ರಾಪಂ ಕಚೇರಿಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹಜರತ್ ಹುಸೇನ್ ಮಾತನಾಡಿದರು. ಗ್ರಾಪಂ ಅಧ್ಯಕ್ಷೆ ಮಹಾದೇವಮ್ಮ, ಉಪಾಧ್ಯಕ್ಷ ನಾಗರಾಜ ತಳವಾರ, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿ ಸದಸ್ಯರಾದ ಯಮನೂರಪ್ಪ, ಕನಕಪ್ಪ ತಳವಾರ ಇತರರಿದ್ದರು.
Published on

ಕನಕಗಿರಿ: ಚುನಾವಣೆಗೂ ಮುನ್ನ ನೀಡಿದ ಭರವಸೆಯಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪಲಿ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಹಜರತ್ ಹುಸೇನ್ ಹೇಳಿದರು.

ತಾಲೂಕಿನ ನವಲಿ ಗ್ರಾಪಂನಲ್ಲಿ ಬುಧವಾರ ಹಮ್ಮಿಕೊಂಡಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಹಾಗೂ ಫಲಾನುಭವಿಗಳ ಜತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಯೋಜನೆಗಳಿಂದ ಆಗಿರುವ ಪ್ರಗತಿ ಹಾಗೂ ಗ್ರಾಮೀಣ ಭಾಗದ ಅರ್ಹ ಫಲಾನುಭವಿಗಳು ಸರ್ಕಾರದ ಐದು ಯೋಜನೆಗಳಿಂದ ಹೊರಗುಳಿಯಬಾರದು ಎಂದ ಅವರು, ಫಲಾನುಭವಿಗಳ ಜತೆ ಚರ್ಚಿಸಿದರು.

ಅನ್ನಭಾಗ್ಯ ಯೋಜನೆಯಡಿ ಅಕ್ಕಿ ಪಡೆಯಲು ವೃದ್ಧ ಹಾಗೂ ಅಸಹಾಯಕ ಫಲಾನುಭವಿಗಳ ಬಯೋಮೆಟ್ರಿಕ್‌ನಿಂದ ವಿನಾಯಿತಿ ನೀಡಿ ಪ್ರತಿ ತಿಂಗಳ 10ನೇ ತಾರೀಖಿನೊಳಗೆ ಪಡಿತರವನ್ನು ಫಲಾನುಭವಿಗಳ ಮನೆಗೆ ತಲುಪಿಸಬೇಕು.

ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸಕಾಲಕ್ಕೆ ಬಸ್‌ಗಳನ್ನು ಸಂಚರಿಸಲು ಅಧಿಕಾರಿಗಳು ಕ್ರಮವಹಿಸಿ. ಮಹಿಳೆಯರು ಶಕ್ತಿ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳಿ ಎಂದರು.

ತಾಪಂ ಇಒ ಕೆ.ರಾಜಶೇಖರ್ ಮಾತನಾಡಿ, ಗ್ರಾಪಂ ವ್ಯಾಪ್ತಿಯ ಎಲ್ಲ ಫಲಾನುಭವಿಗಳು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಂಡು, ಆರ್ಥಿಕವಾಗಿ ಸಬಲರಾದ ಕುರಿತು ಯಶೋಗಾಥೆಗಳನ್ನು ಸಿದ್ಧಪಡಿಸಿ ತಾಲೂಕು ಸಮಿತಿಗೆ ಸಲ್ಲಿಸಲು ತಿಳಿಸಿದರು.

ಯುವನಿಧಿ ಯೋಜನೆಯ ಪೋಸ್ಟರ್ ಬಿಡುಗಡೆಗೊಳಿಸಲಾಯಿತು. ಗ್ರಾಪಂ ಅಧ್ಯಕ್ಷೆ ಮಹಾದೇವಮ್ಮ, ಉಪಾಧ್ಯಕ್ಷ ನಾಗರಾಜ ತಳವಾರ, ಗ್ಯಾರಂಟಿ ಯೋಜನೆಯ ಅನುಷ್ಠಾನ ಸಮಿತಿಯ ಸದಸ್ಯರಾದ ಯಮನೂರಪ್ಪ, ಕನಕಪ್ಪ ತಳವಾರ, ಭೀಮೇಶ, ಕರಿಯಪ್ಪ, ಗ್ಯಾನಪ್ಪ, ಜಗದೀಶ ರಾಠೋಡ್, ವೀರೇಶ್, ಜಗದೀಶ್ ಸುಳೇಕಲ್, ಪಿಡಿಒ ವೀರಣ್ಣ ನಕ್ರಳ್ಳಿ, ಕಾರ್ಯದರ್ಶಿ ಕೊಟ್ರಯ್ಯಸ್ವಾಮಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net