ಕನಕಗಿರಿ ಬಸ್ ನಿಲ್ದಾಣಕ್ಕೆ ಸಾಗುವ ರಸ್ತೆ ಕೆಸರುಮಯ

KANAKAGIRI ROAD
ಕನಕಗಿರಿಯಲ್ಲಿನ ವಾಲ್ಮೀಕಿ ವೃತ್ತದಿಂದ ಬಸ್ ನಿಲ್ದಾಣಕ್ಕೆ ತೆರಳುವ ರಸ್ತೆ ಹಾಳಾಗಿರುವುದು.
Published on

ಕನಕಗಿರಿ: ಪಟ್ಟಣದ ವಾಲ್ಮೀಕಿ ವೃತ್ತದಿಂದ ಬಸ್ ನಿಲ್ದಾಣಕ್ಕೆ ಸಾಗುವ ರಸ್ತೆಯಲ್ಲಿ ಗುಂಡಿಗಳು ಬಿದ್ದಿದ್ದು , ವಾಹನ ಸವಾರರು, ಪಾದಚಾರಿಗಳು ಸಂಚರಿಸಲು ಹರಸಾಹಸ ಪಡುವಂತಾಗಿದೆ.

ಬಸ್ ನಿಲ್ದಾಣ, ಕನಕಾಚಲ ದೇವಸ್ಥಾನಕ್ಕೆ ತೆರಳಬೇಕಾದರೆ ವಾಲ್ಮೀಕಿ ವೃತ್ತದಿಂದ ಎಪಿಎಂಸಿ ಚಿಕ್ಕ ಮಳಿಗೆಯ ರಸ್ತೆಯಿಂದ ಸಾಗಬೇಕು. ಮಳೆಯಾಗಿದ್ದರಿಂದ ಗುಂಡಿಗಳ ಪ್ರಮಾಣ ಹೆಚ್ಚಾಗಿದ್ದು, ಕೆಸರುಮಯವಾಗಿದೆ. ರಸ್ತೆ ಇಕ್ಕೆಲಗಳಲ್ಲಿ ಫುಟ್‌ಪಾತ್ ಅಂಗಡಿಗಳಿರುವುದರಿಂದ ರಸ್ತೆಯ ಪಕ್ಕದಲ್ಲೂ ಹೋಗದ ಸ್ಥಿತಿ ನಿರ್ಮಾಣವಾಗಿದೆ.

ಇತ್ತೀಚೆಗೆ ಸಚಿವ ಶಿವರಾಜ ತಂಗಡಗಿ ನೇತೃತ್ವದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ರಸ್ತೆ ಬಗ್ಗೆ ಚರ್ಚೆಯಾಗಿದ್ದು, ಪಪಂ ಸದಸ್ಯರು ರಸ್ತೆಯನ್ನು ವಿಸ್ತರಣೆ ಮಾಡಿ ಡಿವೈಡರ್ ಅಳವಡಿಸಬೇಕೆಂದು ಒತ್ತಾಯಿಸಿದ್ದಾರೆ. ದೇವಸ್ಥಾನದಿಂದ ವಾಲ್ಮೀಕಿ ವೃತ್ತದವರೆಗೂ ಉತ್ತಮ ರಸ್ತೆ ನಿರ್ಮಿಸುವುದಕ್ಕೆ ಕ್ರಿಯಾಯೋಜನೆ ತಯಾರಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಆ ರಸ್ತೆ ಆಗುವವವರೆಗೂ ಪಾದಚಾರಿಗಳಿಗೆ ಕಷ್ಟ ತಪ್ಪುವುದಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net