ಹಾಸ್ಟೆಲ್ ಸೌಲಭ್ಯ ಸದುಪಯೋಗಪಡೆದುಕೊಳ್ಳಿ; ವಿದ್ಯಾರ್ಥಿಗಳಿಗೆ ಶಾಸಕ ದಢೇಸುಗೂರು ಸಲಹೆ

12092021 Kanakagiri Hostel open mla new
Published on

ಕನಕಗಿರಿ: ಪಟ್ಟಣಕ್ಕೆ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯ ಮಂಜೂರಾಗಿದೆ. ವಿದ್ಯಾರ್ಥಿಗಳು ವಸತಿ ನಿಲಯದ ಸದುಪಯೋಗ ಪಡೆದುಕೊಂಡು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕೆಂದು ಶಾಸಕ ಬಸವರಾಜ ದಢೇಸುಗೂರು ಹೇಳಿದರು.

8ನೇ ವಾರ್ಡ್‌ನಲ್ಲಿರುವ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಕಟ್ಟಡದಲ್ಲಿ ಶನಿವಾರ ತಾತ್ಕಾಲಿಕವಾಗಿ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಚಾಲನೆ ನೀಡಿ ಮಾತನಾಡಿದರು. ಪಟ್ಟಣ ಶೈಕ್ಷಣಿಕ ಕೇಂದ್ರವಾಗಿ ಬೆಳೆಯುತ್ತಿದೆ. ಎಸ್ಸೆಸ್ಸೆಲ್ಸಿ ನಂತರದ ಓದಿಗಾಗಿ ಗ್ರಾಮೀಣ ಭಾಗದಿಂದ ನೂರಾರು ವಿದ್ಯಾರ್ಥಿಗಳು ಪಟ್ಟಣಕ್ಕೆ ಆಗಮಿಸುತ್ತಾರೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ಮೆಟ್ರಿಕ್ ನಂತರದ ವಸತಿ ನಿಲಯ ಮಂಜೂರು ಮಾಡಿಸಲಾಗಿದೆ ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net