ಕಾಲಮಿತಿಯೊಳಗೆ ಕಾಮಗಾರಿ ಮುಗಿಸಿ

VISIT
ಗೌರಿಪುರ ಗ್ರಾಪಂ ವ್ಯಾಪ್ತಿಯ ಅಡವಿಬಾವಿ ದೊಡ್ಡತಾಂಡಾ ಶಾಲೆಯಲ್ಲಿ ನಿರ್ಮಾಣಗೊಂಡ ಆವರಣಗೋಡೆ ಕಾಮಗಾರಿಯ ಕಡತವನ್ನು ತಾಪಂ ನರೇಗಾ ಸಹಾಯಕ ನಿರ್ದೇಶಕಿ ಶರಪೊನ್ನಿಸಾ ಬೇಗಂ ಪರಿಶೀಲಿಸಿದರು. ಕಾರ್ಯದರ್ಶಿ ಶಿವರಾಜ್ ಪಾಟೀಲ್, ತಾಂತ್ರಿಕ ಸಹಾಯಕ ಸೈಯದ್ ಪಾಷಾ ಇತರರಿದ್ದರು.
Published on

ಕನಕಗಿರಿ: ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಿ ಎಂದು ತಾಪಂ ನರೇಗಾ ಸಹಾಯಕ ನಿರ್ದೇಶಕಿ ಶರಪೊನ್ನಿಸಾ ಬೇಗಂ ತಾಂತ್ರಿಕ ಸಹಾಯಕರಿಗೆ ಸೂಚಿಸಿದರು.

ತಾಲೂಕಿನ ಮುಸಲಾಪುರ ಹಾಗೂ ಗೌರಿಪುರ ಗ್ರಾಪಂ ವ್ಯಾಪ್ತಿಯ ಕಚೇರಿಗಳಿಗೆ ಮಂಗಳವಾರ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದರು. ನರೇಗಾ ಯೋಜನೆಯಡಿ ಅನುಷ್ಠಾನಗೊಂಡ ರಾಜೀವ್ ಗಾಂಧಿ ಸೇವಾ ಕೇಂದ್ರ, ಶಾಲಾ ಶೌಚಗೃಹ, ಆವರಣ ಗೋಡೆ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿ ಕಾಮಗಾರಿ ಕಡತಗಳನ್ನು ಸರಿಯಾಗಿ ನಿರ್ವಹಿಸುವಂತೆ ಸಿಬ್ಬಂದಿಗೆ ಸೂಚಿಸಿದರು.

ತಾಂತ್ರಿಕ ಸಂಯೋಜಕ ಸೈಯದ್ ತನ್ವೀರ್, ಗ್ರಾಪಂ ಕಾರ್ಯದರ್ಶಿ ಶಿವರಾಜ್ ಪಾಟೀಲ್, ತಾಂತ್ರಿಕ ಸಹಾಯಕ ಸೈಯದ್ ಪಾಷಾ, ಸಿಬ್ಬಂದಿ ಮೋಹನ್, ಮಹೇಶ ಗೌಡ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net