ಕನಕಾಚಲಪತಿ ದರ್ಶನಕ್ಕೆ ಸಕಲ ಸಿದ್ಧತೆ

06062020 Kanakagiri Kankachalapathi Temple
Published on

ಭಕ್ತರು ಮಾಸ್ಕ್ ಧರಿಸುವುದು ಕಡ್ಡಾಯ | ದರ್ಶನಕ್ಕೆ ಮಾತ್ರ ಅವಕಾಶ

ಕನಕಗಿರಿ: ಐತಿಹಾಸಿಕ ಪ್ರಸಿದ್ಧ ಶ್ರೀ ಕನಕಾಚಲಪತಿ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ಶನಿವಾರ ಸಕಲ ಸಿದ್ಧ್ದತೆಗಳನ್ನು ಮಾಡಲಾಯಿತು. ಕರೊನಾ ವೈರಸ್ ಹರಡಿದ ಹಿನ್ನೆಲೆಯಲ್ಲಿ ದೇವಸ್ಥಾನ ಪ್ರವೇಶ ಹಾಗೂ ಶ್ರೀ ಕನಕಾಚಲಪತಿ ಲಕ್ಷ್ಮೀ ನರಸಿಂಹ ದರ್ಶನಕ್ಕೆ ನಿರ್ಬಂಧ ಹೇರಲಾಗಿತ್ತು.

ರಾಜ್ಯ ಸರ್ಕಾರ ಇತ್ತೀಚೆಗೆ ಕೆಲ ನಿಯಮಗಳೊಂದಿಗೆ ಲಾಕ್‌ಡೌನ್ ಸಡಿಲಿಕೆ ಮಾಡಿದ್ದು, ಜೂ.8ರಿಂದ ಭಕ್ತರಿಗೆ ದೇವರ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಈ ದಿಸೆಯಲ್ಲಿ ದೇವಸ್ಥಾನವನ್ನು ಸ್ವಚ್ಛಗೊಳಿಸಿದ್ದು, ಎಲ್ಲ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಸ್ಯಾನಿಟೈಸರ್ ಬಳಸಿ ದೇವಸ್ಥಾನದ ಒಳಗೆ ಮತ್ತು ಹೊರಗಡೆ ಸ್ವಚ್ಛತೆ ಕೈಗೊಂಡಿದ್ದು, ಭಕ್ತರ ನಡುವೆ ಪರಸ್ಪರ ಅಂತರ ಕಾಪಾಡಲು ದೇವಸ್ಥಾನದಲ್ಲಿ ಮಾರ್ಕ್‌ಗಳನ್ನು ಹಾಕಲಾಗಿದೆ. ದೇವಸ್ಥಾನ ಪ್ರವೇಶಿಸುವ ಭಕ್ತರು ಮಾಸ್ಕ್ ಬಳಸುವುದು ಕಡ್ಡಾಯವಾಗಿದೆ. ಬೇರೆ ಯಾವ ಕಾರ್ಯಕ್ರಮಕ್ಕೆ ಅವಕಾಶವಿಲ್ಲ. ಭಕ್ತರು ಕೇವಲ ದೇವರ ದರ್ಶನ ಮಾತ್ರ ಪಡೆಯಬಹುದಾಗಿದೆ.

ದೇವಸ್ಥಾನಕ್ಕೆ ಬರುವ ಭಕ್ತರಿಗೆ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುವುದು. ತೀರ್ಥ, ಪ್ರಸಾದ, ದೇವಸ್ಥಾನದಲ್ಲಿ ತಂಗುವುದಕ್ಕೆ ಅವಕಾಶವಿರುವುದಿಲ್ಲ. ದರ್ಶನಕ್ಕೆ ಬರುವ ಭಕ್ತರು ಮಾಸ್ಕ್ ಧರಿಸಿರಬೇಕು ಜತೆಗೆ ಸ್ಯಾನಿಟೈಸರ್ ಬಳಕೆ ಮಾಡಬೇಕು. ಭಕ್ತರು ನಿಯಮಗಳನ್ನು ಪಾಲಿಸುವ ಮೂಲಕ ಸಹಕರಿಸಬೇಕು. | ಸಿದ್ದಲಿಂಗಯ್ಯಸ್ವಾಮಿ, ದೇವಸ್ಥಾನದ ಕಾರ್ಯದರ್ಶಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net