ಮರಳಿ ಗೂಡು ಸೇರಿದ ಗಾಯತ್ರಿ ತಿಮ್ಮಾರೆಡ್ಡಿ ಗೌಡ

kanakagiri bjp join
ಬೆಂಗಳೂರು ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸಮ್ಮುಖದಲ್ಲಿ ಗಾಯತ್ರಿ ತಿಮ್ಮಾರೆಡ್ಡಿ ಗೌಡ ಪಕ್ಷ ಸೇರ್ಪಡೆಗೊಂಡರು.
Published on

ಕನಕಗಿರಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಬಿಜೆಪಿ ಟಿಕೆಟ್ ದೊರೆಯದಿದ್ದರಿಂದ ಪಕ್ಷ ತೊರೆದು ಕೆಆರ್‌ಪಿಪಿ ಸೇರಿದ್ದ ಗಾಯತ್ರಿ ತಿಮ್ಮಾರೆಡ್ಡಿಗೌಡ ಶುಕ್ರವಾರ ಬೆಂಗಳೂರಿನಲ್ಲಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಮರಳಿ ಬಿಜೆಪಿಗೆ ಸೇರಿದರು.

ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಮಂಡ್ಯ ಸಂಸದೆ ಸುಮಲತಾ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿಯೇ ಗಾಯತ್ರಿ ತಿಮ್ಮಾರೆಡ್ಡಿಗೌಡ ಪಕ್ಷ ಸೇರ್ಪಡೆಗೆ ನಿರ್ಣಯವಾಗಿತ್ತು. ಅದರಂತೆ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ವಿಶ್ವವೇ ಮೆಚ್ಚಿರುವ ಹಾಗೂ ದೇಶವನ್ನು ಅಭಿವೃದ್ಧಿ ಪಥದತ್ತ ಕೊಂಡೊಯ್ಯುತ್ತಿರುವ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು. ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಬಿಜೆಪಿ ಭಾವುಟ ಹಾರಾಡಬೇಕೆಂಬ ಅಪೇಕ್ಷೆಯಿಂದ ಮಾತೃಪಕ್ಷ ಸೇರಿದ್ದೇವೆ. ಚುನಾವಣಾ ಪ್ರಚಾರದಲ್ಲಿ ತೊಡಗಿಸಿಕೊಂಡು ಅಭ್ಯರ್ಥಿ ಗೆಲುವಿಗೆ ಶ್ರಮಿಸಲಿದ್ದೇವೆ ಎಂದು ಗಾಯತ್ರಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net