ಯುವಕರು ಮತದಾನ ಮಹತ್ವ ಅರಿಯಲಿ

Taluk Sweep Committee
ಕನಕಗಿರಿ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಜಾಗೃತಿ ಕಾರ್ಯಕ್ರಮಕ್ಕೆ ತಾಪಂ ಇಒ ರಾಜಶೇಖರ ಚಾಲನೆ ನೀಡಿದರು. ತಹಸೀಲ್ದಾರ್ ವಿಶ್ವನಾಥ ಮುರುಡಿ, ಉಪನ್ಯಾಸಕರಾದ ಡಾ.ಆಶಿಕಾ, ಲಲಿತಾ ಕಿನ್ನಾಳ, ದೇವೇಂದ್ರಪ್ಪ ಇತರರಿದ್ದರು.
Published on

ಕನಕಗಿರಿ: ಸುಭದ್ರ ದೇಶ ನಿರ್ಮಿಸಲು ಯುವ ಮತದಾರರ ಪಾತ್ರ ನಿರ್ಣಾಯಕವಾಗಿದೆ ಎಂದು ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ತಾಪಂ ಇಒ ಕೆ. ರಾಜಶೇಖರ್ ಹೇಳಿದರು.

ಪಟ್ಟಣದ ಪಂಪಣ್ಣ ಶರಣಪ್ಪ ಗುಗ್ಗಳಶೆಟ್ರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2025ರ ಜಾಗೃತಿ ಕಾರ್ಯಕ್ರಮದಲ್ಲಿ ಶನಿವಾರ ಮಾತನಾಡಿದರು.

ಬಹಳಷ್ಟು ಯುವಕರು ಮತದಾನದ ಮಹತ್ವದ ಬಗ್ಗೆ ತಿಳಿದುಕೊಂಡಿಲ್ಲ. ಸುಭದ್ರ ಸರ್ಕಾರಕ್ಕೆ ಪ್ರತಿ ಮತ ಅಮೂಲ್ಯ. ಮತದಾನ ಎನ್ನುವುದು ಪವಿತ್ರ ಕಾರ್ಯ. 18ವರ್ಷ ಮೇಲ್ಪಟ್ಟ ಪ್ರತಿಯೊಬ್ಬರೂ ಕಡ್ಡಾಯವಾಗಿ ಗುರುತಿನ ಚೀಟಿ ಮಾಡಿಸಿಕೊಳ್ಳಬೇಕು ಎಂದರು.

ತಹಸೀಲ್ದಾರ್ ವಿಶ್ವನಾಥ ಮುರುಡಿ ಮಾತನಾಡಿ, 18ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಅಗತ್ಯವಾದ ವರ್ಗಾವಣೆ ಪ್ರಮಾಣ ಪತ್ರ, ಆಧಾರ್ ಕಾರ್ಡ್, 02 ಪಾಸ್‌ಪೋರ್ಟ್ ಸೈಜ್ ಫೋಟೋ ಹಾಗೂ ಪಾಲಕರ ಮತದಾನ ಗುರುತಿನ ಚೀಟಿ ಪ್ರತಿಯೊಂದಿಗೆ ಹತ್ತಿರದ ಮತಗಟ್ಟೆ ಅಧಿಕಾರಿಯನ್ನು ಸಂಪರ್ಕಿಸಿ ಹೆಸರು ನೋಂದಣಿ ಮಾಡಿಸಿ ಎಂದರು.

ನಂತರ ಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಮೂಡಿಸಲಾಯಿತು. ಉಪನ್ಯಾಸಕರಾದ ಡಾ. ಆಶಿಕಾ, ಲಲಿತಾ ಕಿನ್ನಾಳ, ದೇವೇಂದ್ರಪ್ಪ, ಗೋಪಾಲರೆಡ್ಡಿ, ಪ್ರಮುಖರಾದ ವಿಜಯ್, ಶರಣಬಸವ, ಪವನಕುಮಾರ್, ಯಂಕೋಬ, ಕೆ.ಶಿವಕುಮಾರ್, ಪ್ರಕಾಶ್, ಪುರುಷೋತ್ತಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net