

ಕನಕಗಿರಿ: ತಾಲೂಕಿನ ಸುಳೇಕಲ್ ಗ್ರಾಪಂ ವ್ಯಾಪ್ತಿಯ ಬೆನಕನಾಳ ಗ್ರಾಮದಲ್ಲಿ ಸ್ವಚ್ಛತೆ ನಿರ್ವಹಣೆ ಮತ್ತು ಕಸ ವಿಂಗಡನೆಗಾಗಿ ಸ್ವಚ್ಛ ಭಾರತ ಅಭಿಯಾನದಡಿ ಪ್ರತಿ ಮನೆಗೆ ಶುಕ್ರವಾರ ಕಸದ ಬುಟ್ಟಿಗಳನ್ನು ವಿತರಿಸಲಾಯಿತು.
ಪಿಡಿಒ ಲಕ್ಷ್ಮಣ ಮಾತನಾಡಿ, ಸ್ವಚ್ಛ ಭಾರತ ಅಭಿಯಾನದಡಿ ಕಸದ ಬುಟ್ಟಿಗಳನ್ನು ಖರೀದಿಸಲಾಗಿದ್ದು, ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಪ್ರತಿ ಮನೆ ಮನೆಗೆ ವಿತರಣೆ ಮಾಡಲಾಗುತ್ತಿದೆ. ಹಸಿ ಮತ್ತು ಒಣ ಕಸ ವಿಂಗಡನೆ ಮಾಡುವ ಮೂಲಕ ಸ್ವಚ್ಛತೆಗೆ ಸಹಕಾರ ನೀಡಬೇಕು. ಸಾರ್ವಜನಿಕರು ಸ್ವಚ್ಛತಾ ಅಭಿಯಾನಕ್ಕೆ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಗ್ರಾಪಂ ಉಪಾಧ್ಯಕ್ಷ ಶಿವಾನಂದ ವಂಕಲಕುಂಟಿ, ಸದಸ್ಯರಾದ ಯಮನೂರಪ್ಪ ವದ್ದಿಗೇರಿ, ಈಶಮ್ಮ, ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನಗೌಡ, ಮುಖಂಡ ಮಲ್ಲಯ್ಯಸ್ವಾಮಿ ಹಾಗೂ ಪಂಚಾಯಿತಿ ಸಿಬ್ಬಂದಿ ಇದ್ದರು.