ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಿ

27-knk7
Published on

ಕನಕಗಿರಿ: ಶಾಲಾ, ಕಾಲೇಜು ಸಮಯಕ್ಕೆ ಸುಳೇಕಲ್ ಗ್ರಾಮದಿಂದ ಗಂಗಾವತಿ, ಕನಕಗಿರಿಗೆ ಬಸ್ ಸಂಪರ್ಕ ಕಲ್ಪಿಸಲು ಆಗ್ರಹಿಸಿ ತಾಲೂಕಿನ ಸುಳೇಕಲ್ ಕ್ರಾಸ್ ಬಳಿ ವಿದ್ಯಾರ್ಥಿಗಳು ಬುಧವಾರ ದಿಢೀರ್ ಬಸ್ ತಡೆದು ಪ್ರತಿಭಟನೆ ನಡೆಸಿದರು.

ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ ಈಚನಾಳ ಮಾತನಾಡಿ, ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಬಸ್ಸಿನ ಸೌಕರ್ಯ ಇಲ್ಲವಾಗಿದ್ದರಿಂದ ತರಗತಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಬಸ್ಸಿನ ಅವ್ಯವಸ್ಥೆಯಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಗ್ರಾಮಕ್ಕೆ ಪ್ರತ್ಯೇಕ ಬಸ್ ಬಿಡಬೇಕು. ಕನಕಗಿರಿ-ಗಂಗಾವತಿ ಮಾರ್ಗದಲ್ಲಿ ಸಂಚರಿಸುವ ಬಸ್‌ಗಳು ಸುಳೇಕಲ್ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ಸ್ಥಳಕ್ಕೆ ಸಂಚಾರಿ ನಿಯಂತ್ರಕ ಶರಣಪ್ಪ ಭೇಟಿ ನೀಡಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಬಳಿಕ ಬಸ್ ನಿಲುಗಡೆಗೆ ಹಾಗೂ ಪ್ರತ್ಯೇಕ ಬಸ್ ಬೀಡಲು ಮೇಲಧಿಕಾರಿಗಳ ಗಮನಕ್ಕೆ ತಂದು ಸಮಸ್ಯೆ ಸರಿಪಡಿಸಲಾಗುವುದು ಎಂದು ಭರವಸೆ ನೀಡಿದ ಮೇಲೆ ಪ್ರತಿಭಟನೆ ವಾಪಾಸು ಪಡೆಯಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net