

ಕನಕಗಿರಿ: ತೊಗರಿ ಖರೀದಿ ಕೇಂದ್ರ ಆರಂಭಕ್ಕೆ ಒತ್ತಾಯಿಸಿ ಕನಕಗಿರಿ ತಾಲೂಕು ರೈತ ಸಂಘ ಕೃಷಿ ಸಚಿವ ಚಲುವರಾಯಸ್ವಾಮಿ ಆಪ್ತ ಕಾರ್ಯದರ್ಶಿಗೆ ಬೆಂಗಳೂರಿನಲ್ಲಿ ಮನವಿ ಸಲ್ಲಿಸಿತು.
ತಾಲೂಕಿನಲ್ಲಿ ಹೆಚ್ಚಾಗಿ ತೊಗರಿ ಬೆಳೆದಿರುವುದರಿಂದ ರೈತರು ಲಾಭದ ನಿರೀಕ್ಷೆಯಲ್ಲಿದ್ದಾರೆ. ಈಗಾಗಲೇ ಎಕರೆಗೆ 30 ಸಾವಿರ ರೂ. ಖರ್ಚು ಮಾಡಿದ್ದಾರೆ. ಕಳೆದ ವರ್ಷ ಬರದಿಂದ ಕೈಸುಟ್ಟುಕೊಂಡಿದ್ದ ಬೆಳೆಗಾರರಿಗೆ ಈ ಬಾರಿಯ ಫಸಲು ಆಶಾಭಾವನೆ ಮೂಡಿಸಿದೆ. ಪ್ರಕೃತಿಯ ವೈಪರಿತ್ಯದಿಂದ ಬೆಳೆ ಉಳಿಸಿಕೊಳ್ಳಲು ಖರ್ಚು ಸಹ ಹೆಚ್ಚಾಗಿದೆ. ಹೀಗಾಗಿ ಖರೀದಿ ಕೇಂದ್ರ ತೆರೆದು ರೈತರಿಗೆ ಅನುಕೂಲ ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ಗದ್ದಿ ತಿಳಿಸಿದ್ದಾರೆ. ಕನಕಗಿರಿ ತಾಲೂಕು ಅಧ್ಯಕ್ಷ ಭೀಮನಗೌಡ ಜಿರಾಳ, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬಡಿಗೇರ್, ತಾಲೂಕು ಮಾಧ್ಯಮ ಪ್ರತಿನಿಧಿ ಮರಿಸ್ವಾಮಿ, ತಾಲೂಕು ಸಂಘಟನಾ ಕಾರ್ಯದರ್ಶಿ ಶಿವಪ್ಪ ಅಂಗಡಿ, ಕೆ.ಮಲ್ಲಾಪುರ ಗ್ರಾಮ ಘಟಕ ಅಧ್ಯಕ್ಷ ಸೋಮನಾಥ್ ನಾಯಕ ಇತರರಿದ್ದರು.