ಸೇತುವೆ ನಿರ್ಮಾಣಕ್ಕೆ ಭೂಮಿಪೂಜೆ

Kanakagiri development work puja
ಕನಕಗಿರಿ ತಾಲೂಕಿನ ಕರಡಿಗುಡ್ಡದ ವೆಂಕಟೇಶ್ವರ ದೇವಸ್ಥಾನದಿಂದ ಪಾದಗಟ್ಟೆವರೆಗೆ ರಸ್ತೆ ಕಾಮಗಾರಿಗೆ ಸಚಿವ ಶಿವರಾಜ ತಂಗಡಗಿ ಭೂಮಿ ಪೂಜೆ ನೆರವೇರಿಸಿದರು. ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಕನಕಗಿರಿ ಪಟ್ಟಣ ಪಂಚಾಯಿತಿ ಸದಸ್ಯ ಶರಣೇಗೌಡ ಪಾ., ಬ್ಲಾಕ್ ಅಧ್ಯಕ್ಷ ಗಂಗಾಧರಸ್ವಾಮಿ ಕಲಬಾಗಿಲಮಠ, ತಾಪಂ ಮಾಜಿ ಅಧ್ಯಕ್ಷ ಬಸವಂತಗೌಡ ಇತರರಿದ್ದರು.
Published on

ಕನಕಗಿರಿ: ತಾಲೂಕಿನ ವಿವಿಧ ಗ್ರಾಮಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು.

ಚಿಕ್ಕಮಾದಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕರಡಿಗುಡ್ಡ ಗ್ರಾಮದಲ್ಲಿ 2024-25ನೇ ಸಾಲಿನ ಕೆಕೆಆರ್‌ಡಿಬಿಯ 43.41 ಲಕ್ಷ ರೂ.ವೆಚ್ಚದಲ್ಲಿ ವೆಂಕಟೇಶ್ವರ ದೇವಸ್ಥಾನದಿಂದ ಪಾದಗಟ್ಟೆವರೆಗೆ ರಸ್ತೆ ನಿರ್ಮಾಣ ಹಾಗೂ ಚಿಕ್ಕ ಮಾದಿನಾಳ ಗ್ರಾಮದಿಂದ ರಾಮದುರ್ಗ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ನಾಲಾಕ್ಕೆ ಲೋಕೋಪಯೋಗಿ ಇಲಾಖೆಯ 1.5 ಕೋಟಿ ಅನುದಾನದಲ್ಲಿ ಸೇತುವೆ ಹಾಗೂ 500 ಮೀ. ರಸ್ತೆ ನಿರ್ಮಾಣಕ್ಕೆ ಸಚಿವರು ಭೂಮಿ ಪೂಜೆ ಸಲ್ಲಿಸಿದರು.

ತಹಸೀಲ್ದಾರ್ ವಿಶ್ವನಾಥ ಮುರುಡಿ, ಜಿಪಂ ಮಾಜಿ ಸದಸ್ಯ ವೀರೇಶ ಸಮಗಂಡಿ, ತಾಪಂ ಮಾಜಿ ಅಧ್ಯಕ್ಷ ಬಸವಂತಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗಂಗಾಧರಸ್ವಾಮಿ ಕಲುಬಾಗಿಲಮಠ, ಪ್ರಮುಖರಾದ ಸಿದ್ದಪ್ಪ ನಿರ್ಲೂಟಿ, ವೆಂಕಟೇಶ್ವರ ದೇವಸ್ಥಾನದ ಅರ್ಚಕ ಶ್ರೀನಿವಾಸ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net