ರಾಮನಗರ: ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ವ್ಯಕ್ತಿ ಆನೆ ದಾಳಿಗೆ ಬಲಿಯಾಗಿರುವ ಘಟನೆ ಕನಕಪುರ ತಾಲೂಕಿನ ಬನ್ನಿಮುಕ್ಕೋಡ್ಲು ಗ್ರಾಮದಲ್ಲಿ ಬುಧವಾರ ನಡೆದಿದೆ.
ಗ್ರಾಮದ ರಾಮಕೃಷ್ಣ (52) ಮೃತಪಟ್ಟ ವ್ಯಕ್ತಿ. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವದ ಕೋಡಿಹಳ್ಳಿ ವಲಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದರೊಂದಿಗೆ ಒಂದು ತಿಂಗಳ ಅಂತರದಲ್ಲಿ ಜಿಲ್ಲೆಯಲ್ಲಿ ಆನೆ ದಾಳಿಗೆ ಬಲಿಯಾದ ಮೂರನೇ ವ್ಯಕ್ತಿ ಇವರಾಗಿದ್ದಾರೆ. ಮೃತ ದೇಹವನ್ನು ಕನಕಪುರ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ತರಲಾಗಿದ್ದು, ಕೋಡಿಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.