ನೋಟ್ ಬುಕ್ ವಿತರಣೆ

12 KKP 04
Published on

ಕನಕಪುರ: ತಾಲೂಕಿನ ಉಯ್ಯಂಬಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಹೆಗ್ಗನೂರು ಜಗದೀಶ್ ನೋಟ್‌ಪುಸ್ತಕಗಳನ್ನು ವಿತರಿಸಿದರು.

ಶಾಲಾ ಆವರಣದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ವಿತರಿಸಿದ ಕಾಂಗ್ರೆಸ್ ಮುಖಂಡ ಜಗದೀಶ್ ಮಾತನಾಡಿ ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆಗಳಿಗೆ ಬಡಕುಟುಂಬದ ವಿದ್ಯಾರ್ಥಿಗಳು ಬರುತ್ತಾರೆ. ಅವರಿಗೆ ನೆರವಿನ ಹಸ್ತವಾಗಿ ನೋಟ್‌ಪುಸ್ತಕಗಳನ್ನು ನೀಡಿದಾಗ ಬರವಣಿಗೆ ಮತ್ತು ಕಲಿಕೆಗೆ ಅನುಕೂಲವಾಗುತ್ತದೆ ಎಂಬ ನಿಟ್ಟಿನಲ್ಲಿ ಎಲ್ಲಾ ವಿದ್ಯಾರ್ಥಿಗಳಿಗೂ ನೋಟ್‌ಪುಸ್ತಕಗಳನ್ನು ನೀಡಲಾಗಿದೆ. ವಿದ್ಯಾರ್ಥಿಗಳು ಸರ್ಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿಕೊಂಡು ವಿದ್ಯಾವಂತರಾಗುವಂತೆ ಕರೆನೀಡಿದರು.

ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಹಾಗು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಹಕಾರ್ಯದರ್ಶಿ ಜಿ.ಗಂಗಸ್ವಾಮಿ, ಪ್ರೌಢಶಾಲಾ ಮುಖ್ಯೋಪಾಧ್ಯಾಯಿನಿ ಹೆಚ್.ಎಸ್.ಅನುರಾಧಾ, ಗ್ರಾ.ಪಂ. ಅಧ್ಯಕ್ಷೆ ನೇತ್ರಾವತಿ ಮಹೇಶ್, ಉಪಾಧ್ಯಕ್ಷೆ ಭಾಗ್ಯಮ್ಮ, ಮಾಜಿ ಅಧ್ಯಕ್ಷೆ ಮಂಜುಳಚಂದ್ರು, ಮರಿಯಪ್ಪ, ಪುಟ್ಟಸ್ವಾಮಿ, ಅಶ್ವಿನಿಮಹೇಶ್, ನಾಗೇಂದ್ರ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net