ಸುಬ್ರಹ್ಮಣ್ಯ ದೇವಳಕ್ಕೆ ಕಂಚಿಶ್ರೀ ಭೇಟಿ

Published on

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕಂಚಿ ಕಾಮಕೋಟಿ ಪೀಠದ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಸ್ವಾಮೀಜಿ ಮಂಗಳವಾರ ಭೇಟಿ ನೀಡಿದರು.

ಕಾಶಿಕಟ್ಟೆ ಮಹಾಗಣಪತಿ ಸನ್ನಿಧಾನ ಬಳಿಯಿಂದ ಭವ್ಯ ಮೆರವಣಿಗೆ ಮೂಲಕ ಶ್ರೀಗಳನ್ನು ದೇವಳಕ್ಕೆ ಕರೆ ತರಲಾಯಿತು. ದೇವಳದ ರಾಜಗೋಪುರ ಬಳಿ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ ಶ್ರೀಗಳಿಗೆ ಫಲ ತಾಂಬೂಲ ನೀಡಿ ಸ್ವಾಗತಿಸಿದರು. ಶ್ರೀಗಳು ದೇವಾಲಯದ ಬಳಿಯ ದರ್ಪಣ ತೀರ್ಥ ನದಿಗೆ ತೆರಳಿ ಪೂಜೆ ಸಲ್ಲಿಸಿ ಬಳಿಕ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

ದೇವಳದ ಕಾರ್ಯನಿರ್ವಹಣಾಧಿಕಾರಿ ಅರವಿಂದ ಅಯ್ಯಪ್ಪ ಸುತಗುಂಡಿ, ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್, ಕಚೇರಿ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್, ದೇವಳದ ಸಿಬ್ಬಂದಿ, ಭಕ್ತರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net