ರೈತರು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಿ

13BTP01
Published on

ಬೆಟ್ಟದಪುರ: ಕಂದಾಯ ಇಲಾಖೆಯ ಸೇವೆಗಳನ್ನು ತ್ವರಿತಗತಿಯಲ್ಲಿ ಸಾರ್ವಜನಿಕರಿಗೆ ಹಾಗೂ ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಕಂದಾಯ ಸೇವೆಗಳ ವಿಶೇಷ ಆಂದೋಲನ ಆರಂಭವಾಗಿದ್ದು, ಪ್ರತಿಯೊಬ್ಬರೂ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಹಸೀಲ್ದಾರ್ ಸುರೇಂದ್ರ ಮೂರ್ತಿ ಸಲಹೆ ನೀಡಿದರು.

ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದಲ್ಲಿ ಸೋಮವಾರ ಆಯೋಜಿಸಿದ್ದ ಕಂದಾಯ ಸೇವೆಗಳ ವಿಶೇಷ ಆಂದೋಲನ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮತನಾಡಿದ ಅವರು, ಜಿಲ್ಲಾಧಿಕಾರಿ ಆದೇಶದಂತೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಮೇ 13ರಿಂದ 15 ದಿನಗಳ ಅವಧಿಯಲ್ಲಿ ವಿಶೇಷ ಅಂದೋಲನ ಹಮ್ಮಿಕೊಳ್ಳಲಾಗಿದೆ. ನಿಗದಿ ಮಾಡಿರುವ ಸ್ಥಳದಲ್ಲಿ ಆಯಾ ಗ್ರಾಮ ಆಡಳಿತ ಅಧಿಕಾರಿಗಳು ಬೆಳಗ್ಗೆ 9.30 ರಿಂದ ಹಾಜರಿದ್ದು, ಇಲಾಖೆ ವ್ಯಾಪ್ತಿಗೆ ಬರುವ ಸಮಸ್ಯೆಗಳನ್ನು ಬಗೆಹರಿಸುವುದಕ್ಕೆ ಕ್ರಮ ತೆಗೆದುಕೊಳ್ಳುತ್ತಾರೆ. ಈ ಅವಕಾಶವನ್ನು ರೈತರು ಹಾಗೂ ಸಾರ್ವಜನಿಕರು ಬಳಕೆ ಮಾಡಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಮ ಆಡಳಿತಾಧಿಕಾರಿ ಗುರುನಾಯಕ್, ಗ್ರಾಮ ಸಹಾಯಕ ಮಹೇಂದ್ರ, ಸ್ಥಳೀಯರಾದ ನಾಗೇಶ್ ಹಾಗೂ ರೈತರು ಮತ್ತು ಸಾರ್ವಜನಿಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net