

ಮಂಗಳೂರು: ಕಂಕನಾಡಿ ಬಿಲ್ಲವ ಸೇವಾ ಸಮಾಜದ 2022-23ನೇ ಸಾಲಿನ ವಾರ್ಷಿಕ ಮಹಾಸಭೆ, ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಕಂಕನಾಡಿ ಗರೋಡಿ ಬಳಿಯ ಬಿಲ್ಲವ ಸಭಾಭವನದಲ್ಲಿ ಇತ್ತೀಚೆಗೆ ನಡೆಯಿತು.
ಸಂಘದ ಅಧ್ಯಕ್ಷ ಭರತೇಶ್ ಅಮೀನ್ ಅಧ್ಯಕ್ಷತೆ ವಹಿಸಿದ್ದರು. ಬ್ರಹ್ಮಬೈದರ್ಕಳ ಗರೋಡಿ ಕ್ಷೇತ್ರದ ಅಧ್ಯಕ್ಷ ಕೆ.ಚಿತ್ತರಂಜನ್, ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಆರ್.ಪದ್ಮರಾಜ್, ಆತ್ಮಶಕ್ತಿ ಸಹಕಾರಿ ಸಂಘ ಅಧ್ಯಕ್ಷ ಚಿತ್ತರಂಜನ್, ಉದ್ಯಮಿ ಶೈಲೇಂದ್ರ ಸುವರ್ಣ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಡಾ.ಬಿ.ಸಿ.ರಾಯ್ ಪ್ರಶಸ್ತಿ ವಿಜೇತ ಡಾ.ಸದಾನಂದ ಪೂಜಾರಿ ಮತ್ತು ಮಂಗಳೂರು ಲಯನ್ಸ್ ಕ್ಲಬ್ ನೂತನ ಅಧ್ಯಕ್ಷ ಎಸ್.ಎಸ್.ಪೂಜಾರಿ ಅವರನ್ನು ಸನ್ಮಾನಿಸಲಾಯಿತು.
ಸಂಘದ ಪ್ರದಾನ ಕಾರ್ಯದರ್ಶಿ ಜಯ ಪೂಜಾರಿ ವಾರ್ಷಿಕ ವರದಿ ವಾಚಿಸಿದರು. ಕೋಶಾಧಿಕಾರಿ ಪದ್ಮನಾಭ ಮರೋಳಿ ಲೆಕ್ಕಪತ್ರ ಮಂಡಿಸಿದರು. ಉಪಾಧ್ಯಕ್ಷೆ ಮಮತಾ ಪ್ರವೀಣ್ ನಿರ್ಣಯ ಮಂಡಿಸಿದರು. ಜತೆ ಕಾರ್ಯದರ್ಶಿ ನರೇಶ್ ವಂದಿಸಿದರು. ವಿದ್ಯಾರ್ಥಿವೇತನ ವಿತರಣೆ, ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮವನ್ನು ವಿದ್ಯಾ ಸಮಿತಿ ಸಂಚಾಲಕ ಕೆ.ರಮಾನಂದ ನೆರವೇರಿಸಿದರು. ದೇವದಾಸ್ ಮರೋಳಿ ಮತ್ತು ದಿನೇಶ್ ಅಂಚನ್ ಕಾರ್ಯಕ್ರಮ ನಿರೂಪಿಸಿದರು.