ಪಾಪು ಸಮಾಧಿ ಜೀರ್ಣೋದ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಆಗ್ರಹ

kannada and culture dept
Published on

ಬೆಂಗಳೂರು: ನಿರಂತರ ಕನ್ನಡ ಪರ ಹೋರಾಟ ಮಾಡುವುದರಲ್ಲಿ ಮುಂಚೂಣಿಯಲ್ಲಿದ್ದ ಡಾ. ಪಾಟೀಲ ಪುಟ್ಟಪ್ಪ ಅವರ ಸಮಾಧಿಯನ್ನು ಜೀರ್ಣೋದ್ಧಾರ ಮಾಡಿ ಸೂಕ್ತ ಗೌರವ ಸಲ್ಲಿಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಸರ್ಕಾರಕ್ಕೆ ಮನವಿ ಮಾಡಿದೆ.

ಈ ಕುರಿತು ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಪತ್ರ ಬರೆದಿದ್ದಾರೆ. ಕನ್ನಡ ಭಾಷೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಮತ್ತು ಕರ್ನಾಟಕ, ಕನ್ನಡಿಗರ ಸಮಸ್ಯೆಗಳಿಗೆ ಸ್ಪಂದಿಸಿ ತಮ್ಮದೆ ಆದ ಕೊಡುಗೆ ನೀಡಿದ ಹಲವಾರು ಕನ್ನಡಪರ ಚಿಂತಕರು, ಹೋರಾಟಗಾರರು, ಸಾಹಿತಿಗಳು, ಚಳವಳಿಗಾರರ ಸಾಲಿನಲ್ಲಿ ಡಾ. ಪಾಟೀಲ ಪುಟ್ಟಪ್ಪ ಅಗ್ರಸ್ಥಾನದಲ್ಲಿದ್ದರು.

1985ರಲ್ಲಿ ಕನ್ನಡ ಕಾವಲು ಮತ್ತು ಗಡಿ ಸಲಹಾ ಸಮಿತಿ ಅಧ್ಯಕ್ಷರಾಗಿ ಕನ್ನಡ ಬಳಸದ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನವಾಗಿದ್ದರು. ದಿಟ್ಟ ಪತ್ರಿಕೋದ್ಯಮಿಯೂ ಆಗಿದ್ದರು. 2020ರಲ್ಲಿ ನಿಧನರಾಗಿದ್ದ ಪಾಪು ಸಮಾಧಿ ಹಾವೇರಿ ತಾಲೂಕಿನ ಹಲಗೇರಿ ಗ್ರಾಮದಲ್ಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net