ಅಧ್ಯಯನ ಸಮಿತಿ ರಚನೆ - ತುಳು ಎರಡನೇ ಭಾಷೆ ವಿಚಾರ

Kannada Bhavana
Published on

ಬೆಂಗಳೂರು: ತುಳುವನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ವಿಚಾರವಾಗಿ ಅಧ್ಯಯನ ನಡೆಸಲು, ಐದು ಮಂದಿ ಸಮಿತಿ ರಚಿಸಲಾಗಿದೆ. ಈ ಕುರಿತು ಮಾನದಂಡಗಳ ಅಧ್ಯಯನ ಸಂಬಂಧ ಸಮಿತಿಯು ಆಂಧ್ರಪ್ರದೇಶಕ್ಕೆ ತೆರಳಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಕೆ.ಎಂ. ಗಾಯತ್ರಿ ಸಮಿತಿಯ ಅಧ್ಯಕ್ಷರಾಗಿದ್ದಾರೆ. ಕಾನೂನು ಇಲಾಖೆ ಉಪ ಕಾರ್ಯದರ್ಶಿ ವನಿತಾ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಉಪ ಕಾರ್ಯದರ್ಶಿ ಕೆ.ಎನ್. ಮೂರ್ತಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ಸುಧಾಕರ್ ಶೆಟ್ಟಿ ಸದಸ್ಯರಾಗಿದ್ದಾರೆ. ತುಳು ಭಾಷೆಯನ್ನು ಕರ್ನಾಟಕ ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಬೇಕೆಂಬ ಬೇಡಿಕೆ ಇದೆ. ಈ ಬಗ್ಗೆ ಅನುಸರಿಸಲಾಗುವ ಮಾನದಂಡಗಳ ಬಗ್ಗೆ ಅಧ್ಯಯನ ನಡೆಸಿ, ಮೂರು ತಿಂಗಳೊಳಗೆ ವರದಿ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net