ಕಸಾಪ ಕನ್ನಡಾಭಿಮಾನದ ಅಭಿಯಾನವನ್ನು ಇಂದು ಉದ್ಘಾಟಿಸಲಿರುವ ಸಚಿವ ಶಿವರಾಜ ತಂಗಡಗಿ

IMG-20230821-WA0027
Published on

ಕಲಬುರಗಿ: ಇಂದಿನ ಹೊಸ ಪೀಳಿಗೆಯಲ್ಲಿ ನಮ್ಮ ಕನ್ನಡ ಭಾಷೆ, ಸಂಸ್ಕೃತಿಯ ಬಗ್ಗೆ ಜಾಗೃತಿ ಮೂಡಿಸುವ ಹೊಸ ಪ್ರಯೋಗವೆಂಬAತೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ `ಜಗದೇಳಿಗೆಯಾಗುವದಿದೆ ಕರ್ನಾಟಕದಿಂದೆ' ಎಂಬ ಕನ್ನಡಾಭಿಮಾನದ ಅಭಿಯಾನದ ಉದ್ಘಾಟನಾ ಸಮಾರಂಭವನ್ನು ಸೋಮವಾರ [ ಆ.೨೮ ] ಬೆಳಗ್ಗೆ ೧೦.೧೫ ಕ್ಕೆ ನಗರದ ಕನ್ನಡ ಭವನದಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ಜನ್ಮ ಕೊಟ್ಟ ತಾಯಿ, ಅನ್ನ ಕೊಟ್ಟ ಜನ್ಮ ಭೂಮಿ, ನಾವಾಡುವ ಮಾತೃ ಭಾಷೆ ಸ್ವರ್ಗಕ್ಕಿಂತ ಮಿಗಿಲು ಮತ್ತು ಪವಿತ್ರವಾದುದು ಎಂಬ ಸಾಮಾಜಿಕ ಸಂದೇಶಗಳನ್ನು ಸಮಾಜಕ್ಕೆ  ಮುಟ್ಟಿಸುವ ಪ್ರಯತ್ನ ಈ ಅಭಿಯಾನದ್ದಾಗಿದೆ. ಸೋಮವಾರ ಆರಂಭಗೊಳ್ಳುವ ಈ ಅಬಿಯಾನ ಜಿಲ್ಲೆಯಾದ್ಯಂತ ನಡೆಯಲಿದೆ.
ರಾಜ್ಯದ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ಎಸ್. ತಂಗಡಗಿ ಅವರು ಅಭಿಯಾನಕ್ಕೆ ಚಾಲನೆ ನೀಡಲಿದ್ದು, ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಡಾ. ಅಜಯಸಿಂಗ್, ಶಾಸಕ ಅಲ್ಲಮಪ್ರಭು ಪಾಟೀಲ ನೆಲೋಗಿ, ಕನ್ನಡ ಸಾಹಿತ್ಯ ಪರಿಷತ್ತಿನ ರಾಯಚೂರು ಅಧ್ಯಕ್ಷ ರಂಗಣ್ಣ ಪಾಟೀಲ ಅಳ್ಳುಂಡಿ, ಯಾದಗಿರಿ ಅಧ್ಯಕ್ಷ ಸಿದ್ದಪ್ಪ ಹೊಟ್ಟಿ, ಬಳ್ಳಾರಿ ಅಧ್ಯಕ್ಷ ನಿಷ್ಠಿ ರುದ್ರಪ್ಪ, ಬೀದರ ಅಧ್ಯಕ್ಷ ಸುರೇಶ ಚೆನ್ನಶೆಟ್ಟಿ, ಕೊಪ್ಪಳ ಅಧ್ಯಕ್ಷ ಶರಣೇಗೌಡ ಪಾಟೀಲ ಅವರುಗಳು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net